ಬೆಂಗಳೂರು: ಹೊಸಕೋಟೆ ನಗರ ಎಂ.ವಿ.ಜೆ ಆಸ್ಪತ್ರೆ ಬಳಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್‌ಆರ್‌ಟಿಸಿ ಬಸ್ ಮತ್ತು ಕ್ಯಾಂಟರ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಿಂದ ಎರಡೂ ವಾಹನಗಳು ನಜ್ಜುಗೊಜ್ಜಾಗಿದೆ.
ಅಪಘಾತದಲ್ಲಿ 15 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆದರೆ, ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ..
ಇನ್ನು ಅತಿ ವೇಗ ಮತ್ತು ನಿರ್ಲಕ್ಷ ಚಾಲನೆಯೇ ಅಪಘಾತಕ್ಕೆ ಪ್ರಮುಖ ಕಾರಣ ಎಂದು ಶಂಕಿಸಲಾಗಿದ್ದು, ಡಿಕ್ಕಿಯ ತೀವ್ರತೆಗೆ ಬಸ್ ಮತ್ತು ಕ್ಯಾಂಟರ್ ಎರಡೂ ನುಜ್ಜುಗುಜ್ಜಾಗಿದ್ದು, ಗಾಯಾಳುಗಳನ್ನು ತಕ್ಷಣವೇ ಹೊಸಕೋಟೆಯ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಅಪಘಾತದ ಬೆನ್ನಲ್ಲೇ ಹೊಸಕೋಟೆ ಸಂಚಾರಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನು ಘಟನೆ ಸಂಬಂಧ ಪೊಲೀಸರು ಹೆಚ್ಚಿನ ತನಿಖೆ ಮುಂದುವರೆಸಿದ್ದಾರೆ.



