ಉಡುಪಿ: ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು ಜಂಕ್ಷನ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಮಾಜಿ ಸಚಿವ ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರಿಗೆ ಬಸ್ ಡಿಕ್ಕಿ ಹೊಡೆದಿದೆ.
ಇಂದು ಮಧ್ಯಾಹ್ನ ಸುಮಾರು 3.30ರ ವೇಳೆಗೆ ಅಪಘಾತ ಸಂಭವಿಸಿದ್ದು, ಕಾರ್ಕಳದಿಂದ ಮೂಡುಬಿದ್ರೆ ಕಡೆಗೆ ತೆರಳುತ್ತಿದ್ದ ಬಸ್ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇನ್ನೋವಾ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.
ಅಪಘಾತದ ಬಳಿಕ ಕಾರಿನಲ್ಲಿ ಸಿಲುಕಿದ್ದ ರಮಾನಾಥ ರೈ ಅವರನ್ನು ಸ್ಥಳೀಯರು ಹರಸಾಹಸಪಟ್ಟು ಹೊರತೆಗೆದಿದ್ದಾರೆ. ಗಾಯಗೊಂಡ ರಮಾನಾಥ ರೈ ಸೇರಿದಂತೆ ಗಾಯಾಳುಗಳನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಸ್ ಹಾಗೂ ಕಾರಿನಲ್ಲಿದ್ದ ಹಲವರಿಗೂ ಗಾಯಗಳಾಗಿದ್ದು, ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.



