ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ವೇನಲ್ಲಿ ಅಪಘಾತ: ಕಾರಿಗೆ ಐರಾವತ ಬಸ್ ಡಿಕ್ಕಿ – ನಾಲ್ವರು ಸಾವು!

0
Spread the love

ಮಂಡ್ಯ:- ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ವೇನಲ್ಲಿ ಅಪಘಾತ ಸಂಭವಿಸಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿಗೆ ಐರಾವತ ಬಸ್ ಡಿಕ್ಕಿ ಹೊಡೆದು ಈ ದುರಂತ ಸಂಭವಿಸಿದೆ. ಮಂಡ್ಯ ತಾಲೂಕಿನ ತೂಬಿನಕೆರೆ ಗ್ರಾಮದ ಬಳಿಯ ಹೈವೇ ಎಕ್ಸಿಟ್​ನಲ್ಲಿ ಘಟನೆ ಜರುಗಿದೆ.

Advertisement

ಸತ್ಯಾನಂದ ರಾಜೇ ಆರಸ್ (51) ಅವರ ಪತ್ನಿ ನಿಶ್ಚಿತಾ (45), ಚಂದ್ರು(62) ಅವರ ಪತ್ನಿ ಸುವೇದಿನಿ ರಾಣಿ(50) ಮೃತರು. ಎಕ್ಸ್​ಪ್ರೆಸ್ ಹೈವೇಯಿಂದ ಎಕ್ಸಿಟ್ ಆಗುವಾಗ ಕಾರು ಚಾಲಕನಿಗೆ ಗೊಂದಲವಾಗಿದೆ. ಹೀಗಾಗಿ ಮತ್ತೆ ಎಕ್ಸ್​ಪ್ರೆಸ್ ಹೈವೇಗೆ ಚಾಲಕ ಕಾರು ತಿರುಗಿಸಿದ್ದಾರೆ. ಈ ವೇಳೆ ಹಿಂದಿನಿಂದ ವೇಗವಾಗಿ ಬರುತ್ತಿದ್ದ ಕೆಎಸ್​​ಆರ್​ಟಿಸಿ ಐರಾವತ ಬಸ್ ಡಿಕ್ಕಿ ಹೊಡೆದಿದೆ.

ಬೆಂಗಳೂರಿನಿಂದ ಮೈಸೂರಿಗೆ ತೆರಳುವ ಮಾರ್ಗದಲ್ಲಿ ದುರ್ಘಟನೆ ಸಂಭವಿಸಿದ್ದು, ಐರಾವತ ಬಸ್ ಡಿಕ್ಕಿ ರಭಸಕ್ಕೆ ಟಾಟಾ ಪಂಚ್​ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸದ್ಯ ಸ್ಥಳಕ್ಕೆ ದಕ್ಷಿಣ ವಲಯ ಡಿಐಜಿ ಬೋರಲಿಂಗಯ್ಯ, ಎಸ್​ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.


Spread the love

LEAVE A REPLY

Please enter your comment!
Please enter your name here