ನೆಲಮಂಗಲ: ರಸ್ತೆ ಗುಂಡಿ ತಪ್ಪಿಸಲು ಹೋಗಿ ಕಾರು ಪಲ್ಟಿಯಾದ ಘಟನೆ ನೆಲಮಂಗಲ ತಾಲೂಕಿನ ಕುಣಿಗಲ್ ಬೈಪಾಸ್ ಫ್ಲೈಓವರ್ ಬಳಿ ನಡೆದಿದೆ.
Advertisement
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಆರು ಮಂದಿ ಅದೃಷ್ಟವಶಾತ್ ಪವಾಡದಂತೆ ಪಾರಾಗಿದ್ದು, ಸಣ್ಣಪುಟ್ಟ ಗಾಯಗಳೊಂದಿಗೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆದ್ದಾರಿಯ ದುರಸ್ತಿ ಕೆಲಸದ ನಿರ್ಲಕ್ಷ್ಯದಿಂದಾಗಿ ಇಂತಹ ಅಪಘಾತಗಳು ಹೆಚ್ಚುತ್ತಿದ್ದು, ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ. ಪ್ರತಿದಿನ ಈ ಮಾರ್ಗದಲ್ಲಿ ಸಚಿವರು, ಶಾಸಕರು, ಅಧಿಕಾರಿಗಳು ಸಂಚರಿಸುತ್ತಿದ್ದರೂ, ಸಮಸ್ಯೆಗೆ ಪರಿಹಾರ ಕಾಣದಿರುವುದರಿಂದ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.