HomeKarnataka Newsಬೈಕ್‌ಗೆ ಸೈಡ್ ಕೊಡುವಾಗ ‌ಅವಘಡ! ಕಾಫಿ ತೋಟಕ್ಕೆ ಕಾರು ಉರುಳಿ ಐವರಿಗೆ ಗಾಯ

ಬೈಕ್‌ಗೆ ಸೈಡ್ ಕೊಡುವಾಗ ‌ಅವಘಡ! ಕಾಫಿ ತೋಟಕ್ಕೆ ಕಾರು ಉರುಳಿ ಐವರಿಗೆ ಗಾಯ

For Dai;y Updates Join Our whatsapp Group

ಚಿಕ್ಕಮಗಳೂರು: ಬೈಕ್‌ಗೆ ಸೈಡ್ ಕೊಡುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಫಿ ತೋಟಕ್ಕೆ ನುಗ್ಗಿ ಪಲ್ಟಿಯಾದ ಘಟನೆ ಕಳಸ ತಾಲೂಕಿನ ಬೈನೇಕಾಡು ಹೋಮ್‌ಸ್ಟೇ ಬಳಿ ನಡೆದಿದೆ.

ವ್ಯಾಗನರ್ ಕಾರು ಹೊರನಾಡಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಎದುರಿನಿಂದ ಬಂದ ಬೈಕ್‌ಗೆ ಸೈಡ್ ಕೊಡಲು ಯತ್ನಿಸಿದಾಗ, ನಿರಂತರ ಮಳೆಯಿಂದ ನೆನೆದಿದ್ದ ರಸ್ತೆ ಬದಿಗೆ ಕಾರು ಇಳಿದಿದ್ದು, ಆ ಕ್ಷಣದಲ್ಲಿ ಸ್ಕಿಡ್ ಆಗಿ ಕಾಫಿ ತೋಟಕ್ಕೆ ನುಗ್ಗಿ ಪಲ್ಟಿಯಾಗಿದೆ.

ಅಪಘಾತದಲ್ಲಿ ಕಾರಿನಲ್ಲಿದ್ದ ಐವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳೀಯರು ತಕ್ಷಣವೇ ಧಾವಿಸಿ ಗಾಯಾಳುಗಳನ್ನು ರಕ್ಷಣೆ ಮಾಡಿದ್ದಾರೆ.

ಘಟನೆ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಮಳೆಯಿಂದ ರಸ್ತೆ ಬದಿಗಳು ಜಾರುವ ಸ್ಥಿತಿಯಲ್ಲಿ ಇರುವುದರಿಂದ ವಾಹನ ಚಾಲಕರು ವಿಶೇಷ ಎಚ್ಚರಿಕೆ ವಹಿಸಬೇಕು ಎಂದು ಪೊಲೀಸರು ಪ್ರವಾಸಿಗರು ಹಾಗೂ ಸ್ಥಳೀಯರಿಗೆ ಮನವಿ ಮಾಡಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img