ಮಂಗಳೂರು:- ನದಿಯಲ್ಲಿ ಈಜಲು ಹೋಗಿ ಮೂವರು ಯುವಕರು ನೀರುಪಾಲಾದ ಘಟನೆ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಮೂಡುಕೋಡಿಯಲ್ಲಿ ಜರುಗಿದೆ.
Advertisement
20 ವರ್ಷದ ಲಾರೆನ್ಸ್, 19 ವರ್ಷದ ಸೂರಜ್, 19 ವರ್ಷದ ಜೈಸನ್ ಮೃತ ದುರ್ದೈವಿಗಳು ಎನ್ನಲಾಗಿದೆ. ವಾಲ್ಟರ್‌ರವರ ಮನೆಯಲ್ಲಿ ಊಟ ಮುಗಿಸಿ ಮೂಡುಕೋಡಿ ಗ್ರಾಮದ ಬರ್ಕಜೆ ಡ್ಯಾಂ ಬಳಿ ಯುವಕರು ಈಜಲು ಹೋಗಿದ್ದರು. ಈ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಮೂವರು ಯುವಕರು ನೀರುಪಾಲಾಗಿದ್ದಾರೆ.
ಈಜು ತಜ್ಞರು ಮೂವರು ಯುವಕರ ಮೃತದೇಹ ನೀರಿನಿಂದ ಹೊರತೆಗೆದಿದ್ದಾರೆ. ಮೃತರು ಮಂಗಳೂರಿನ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು. ಘಟನಾ ಸ್ಥಳಕ್ಕೆ ವೇಣೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.