ಜಯಮಂಗಲಿ ನದಿಯಲ್ಲಿ ಈಜಲು ಹೋಗಿ ಅವಘಡ: ನೀರಲ್ಲಿ ಮುಳುಗಿ ಬಾಲಕ ಸಾವು!

0
Spread the love

ತುಮಕೂರು:- ಇಲ್ಲಿನ ಜಯಮಂಗಲಿ ನದಿಯಲ್ಲಿ ಈಜಲು ತೆರಳಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಜರುಗಿದೆ.

Advertisement

ತುಮಕೂರು ಜಿಲ್ಲೆಯ ಕೊಡಿಗೇನಹಳ್ಳಿಯಲ್ಲಿ ಘಟನೆ ಜರುಗಿದ್ದು, 14 ವರ್ಷದ ಹರ್ಷವರ್ಧನ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಹರ್ಷವರ್ಧನ ಕೊಡಿಗೇನಹಳ್ಳಿ ಪ್ರೌಢಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ. ಪಟ್ಟಣದ ಬಿಸಿಎಂ ಹಾಸ್ಟೆಲ್‌ನಲ್ಲಿದ್ದ. ಮಂಗಳವಾರ ಶಾಲೆಯಲ್ಲಿ ನಡೆದ ಚಿತ್ರಕಲೆ ಪರೀಕ್ಷೆಗೆ ಹಾಜರಾಗಿ ಮಧ್ಯಾಹ್ನ 1:30ಕ್ಕೆ ಶಾಲೆ ಬಿಟ್ಟ ನಂತರ ಸ್ನೇಹಿತರ ಜೊತೆಗೂಡಿ ಜಯಮಂಗಲಿ ನದಿಯಲ್ಲಿ ಈಜಲು ತೆರಳಿದ್ದಾನೆ. ಈ ವೇಳೆ ಸುಮಾರು 15ರಿಂದ 20 ಅಡಿ ಆಳದ ಗುಂಡಿಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ಪುತ್ರನನ್ನು ಕಳೆದುಕೊಂಡ ಹರ್ಷವರ್ಧನನ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು. ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸಿ, ನ್ಯಾಯ ಒದಗಿಸಬೇಕು ಎಂದು ಪೋಷಕರು ಪೊಲೀಸರನ್ನು ಒತ್ತಾಯಿಸಿದರು.


Spread the love

LEAVE A REPLY

Please enter your comment!
Please enter your name here