ಮಂಡ್ಯ: ಆಕಸ್ಮಿಕ ಬೆಂಕಿ ಅವಘಡದಿಂದಾಗಿ 3 ಅಂತಸ್ತಿನ ಬೇಕರಿ ಸುಟ್ಟು ಕರಕಲಾದ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದಲ್ಲಿ ನಡೆದಿದೆ. ವೈಷ್ಣವಿ ಐಯ್ಯಂಗಾರ್ ಬೇಕರಿ ಹರ್ಷ ಎಂಬುವವರಿಗೆ ಸೇರಿದೆ. 50 ಲಕ್ಷ ಮೌಲ್ಯದ ವಸ್ತುಗಳು, ಮಿಷನರಿಗಳು ಸುಟ್ಟುಕರಕಲು ಆಗಿದೆ.
Advertisement
ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿರುವ ಶಂಕೆ ವ್ಯಕ್ತವಾಗಿದೆ. ಬೆಂಕಿ ಅವಘಡದಲ್ಲಿ 50 ಲಕ್ಷಕ್ಕೂ ಹೆಚ್ಚು ರೂಪಾಯಿ ನಷ್ಟವಾಗಿರುವ ಬಗ್ಗೆ ಮಾಹಿತಿ ಲಭಿಸಿದೆ. ಮಧ್ಯರಾತ್ರಿಯೆ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮಳವಳ್ಳಿ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.