ಗದಗ: ನಗರದ ಶಿವಬಸವ ನಗರದಲ್ಲಿ ಆಕಸ್ಮಿಕವಾಗಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಕೇಬಲ್ ಲೈನ್ಗಳಿಗೆ ಬಳಸುವ ಪ್ಲಾಸ್ಟಿಕ್ ಪೈಪ್ಗಳು ಹೊತ್ತಿ ಉರಿದು ಭಸ್ಮವಾಗಿವೆ. ಲಕ್ಷಾಂತರ ರೂಪಾಯಿ ಮೌಲ್ಯದ ಪೈಪ್ಗಳು ಬೆಂಕಿಗೆ ಆಹುತಿಯಾಗಿದ್ದು, ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿತ್ತು.
ಬೆಂಕಿಯಿಂದ ಉಂಟಾದ ಕಪ್ಪು ದಟ್ಟ ಹೊಗೆ ಸುತ್ತಮುತ್ತಲಿನ ಬಡಾವಣೆ ಪ್ರದೇಶವನ್ನು ಆವರಿಸಿದ್ದು, ಸ್ಥಳೀಯರು ಭಯಭೀತರಾಗಿದ್ದರು. ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದರು.
ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲವೆಂದು ತಿಳಿದು ಬಂದಿದೆ. ಆದರೆ ಪೈಪ್ಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದು, ನಷ್ಟದ ಪ್ರಮಾಣ ಲಕ್ಷಾಂತರ ರೂಪಾಯಿಗಳಷ್ಟಿದೆ ಎಂದು ಅಂದಾಜಿಸಲಾಗಿದೆ.
ಈ ಘಟನೆ ಬೆಟಗೇರಿ ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಬೆಂಕಿ ಕಾಣಿಸಿಕೊಂಡ ಕಾರಣ ಕುರಿತು ತನಿಖೆ ಮುಂದುವರೆದಿದೆ.



