ಬಳ್ಳಾರಿ: ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್ಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿರುವ ಘಟನೆ ಬಳ್ಳಾರಿ ನಗರದ ಅನಂಪುರ ರಸ್ತೆಯ ಆಟೋ ನಗರ ಪ್ರದೇಶದಲ್ಲಿ ನಡೆದಿದೆ.
ಚೆನೈಯಿಂದ ಬಳ್ಳಾರಿಗೆ ಬೈಕ್ಗಳನ್ನು ಸಾಗಿಸುತ್ತಿದ್ದ ಲಾರಿಯಲ್ಲಿ ಸಂಭವಿಸಿದ ಈ ಅವಘಡದಲ್ಲಿ ಸುಮಾರು 45 ಲಕ್ಷ ರೂಪಾಯಿ ಮೌಲ್ಯದ 40 ಬೈಕ್ಗಳು ಬೆಂಕಿಗೆ ಆಹುತಿಯಾಗಿವೆ.
ಅದೃಷ್ಟವಶಾತ್ ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮಾಹಿತಿ ತಿಳಿದ ಕೂಡಲೇ ಘಟನಾ ಸ್ಥಳಕ್ಕಾಗಮಿಸಿದ ಅಗ್ನಿಶಾಮಕದಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬಂದು ಬೆಂಕಿ ನಂದಿಸುವಷ್ಟರಲ್ಲಿ ಲಾರಿಯಲ್ಲಿದ್ದ ಬೈಕ್ಗಳು ಸುಟ್ಟು ಕರಕಲಾಗಿದ್ದವು. ಘಟನೆ ಸಂಬಂಧ ಬಳ್ಳಾರಿಯ ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



