ಆದಾಯಕ್ಕಿಂತ ಹೆಚ್ಚು ಆಸ್ತಿಗಳಿಕೆ: ಭ್ರಷ್ಟರಿಗೆ ಲೋಕಾ ಶಾಕ್, ಚಿತ್ರದುರ್ಗ ದಾವಣಗೆರೆ ಸೇರಿ ಹಲವೆಡೆ ದಾಳಿ!

0
Spread the love

ಬೆಂಗಳೂರು:- ರಾಜ್ಯದಲ್ಲಿ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ಮುಂದುವರಿದಿದೆ.

Advertisement

ಅದರ ಭಾಗವಾಗಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಬೆಳ್ಳಂ ಬೆಳಿಗ್ಗೆ ಲೋಕಾ ಅಧಿಕಾರಿಗಳು ದಾಳಿ ಮಾಡಿ ಪರಿಶೀಲಿಸಿದರು.

ಬೆಂಗಳೂರಿನಲ್ಲಿ ಮೂರು ಕಡೆ ದಾಳಿ:-

ಬೆಂಗಳೂರಿನಲ್ಲಿ ಮೂರು ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ಲೋಕಾ ದಾಳಿ ನಡೆಸಿದೆ. ಮಲ್ಲಸಂದ್ರದ ಮೆಟರ್ನಿಟಿ ಆಸ್ಪತ್ರೆಯ ಮೆಡಿಕಲ್ ಆಫೀಸರ್, ಮೆಡಿಕಲ್ ಆಫೀಸರ್ ಮಂಜುನಾಥ್ ಜಿ, ಕರ್ನಾಟಕ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (KSEEB) ಡೈರೆಕ್ಟರ್ ವಿ. ಸುಮಂಗಲ, BMRCL ವಿಶೇಷ ಭೂಸ್ವಾಧೀನಾ ಸರ್ವೇಯರ್ ಎನ್ ಕೆ ಗಂಗ ಮಾರಿಗೌಡ ಮನೆ ಮೇಲೆ ಲೋಕಾ ರೇಡ್​ ಮಾಡಿ ಪರಿಶೀಲಿಸಿದೆ.

ಬೀದರ್‌ನಲ್ಲಿ‌ ಲೋಕಾ ದಾಳಿ:

ಅಕ್ರಮ ಆಸ್ತಿಗಳಿಕೆ ಆರೋಪ ಹಿನ್ನಲೆಯಲ್ಲಿ ಬೆಳ್ಳಂಬೆಳಗ್ಗೆ ಬೀದರ್‌ನಲ್ಲಿ‌ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಭ್ರಷ್ಟ ಅಧಿಕಾರಿಗೆ ಶಾಕ್ ನೀಡಿದ್ದಾರೆ.

ಔರಾದ್ ತಾಲೂಕಿನ ಕೃಷಿ ಇಲಾಖೆಯ ಸಹಾಯಕ ನಿರ್ದೇಶಕರಾದ ದೂಳಪ್ಪ ಎಂಬ ಅಧಿಕಾರಿಯ ನಿವಾಸ ಸೇರಿದಂತೆ ಏಕಕಾಲಕ್ಕೆ ಜಿಲ್ಲೆಯಾದ್ಯಂತ ಒಟ್ಟು 4 ಕಡೆ ದಾಳಿ ಮಾಡಲಾಗಿದೆ.

ಅಕ್ರಮ ಆಸ್ತಿಗಳಿಗೆ ದೂರು ಬಂದ ಹಿನ್ನೆಲೆಯಲ್ಲಿ ದಾಳಿ ಮಾಡಿ ಲೋಕಾಯುಕ್ತ ಅಧಿಕಾರಿಗಳು ನಿವಾಸದಲ್ಲಿ ದಾಖಲೆಗಳನ್ನ ತೀವ್ರ ಪರಿಶೀಲನೆ ಮಾಡುತ್ತಿದ್ದಾರೆ. ಲೋಕಾಯುಕ್ತ ಎಸ್‌ಪಿ ಸಿದ್ದರಾಜು ಮಾರ್ಗದರ್ಶನದಲ್ಲಿ ಲೋಕಾಯುಕ್ತ ಡಿವೈಎಸ್ಪಿ ಹನುಮಂತ ರೆಡ್ಡಿ ನೇತೃತ್ವದಲ್ಲಿ 4 ಕಡೆ ಏಕಕಾಲಕ್ಕೆ ದಾಳಿ ಮಾಡಲಾಗಿದೆ.

ಚಿತ್ರದುರ್ಗದಲ್ಲಿ ದಾಳಿ

ಚಿತ್ರದುರ್ಗ ಲೋಕಾಯುಕ್ತ ಎಸ್ಪಿ ವಾಸುದೇವರಾಮ್, ಡಿವೈಎಸ್ಪಿ ಮೃತ್ಯುಂಜಯ, ಪಿಐ ಮಂಜುನಾಥ್ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

ಜಿಲ್ಲೆಯಲ್ಲಿ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಬೆಳ್ಳಂಬೆಳಗ್ಗೆ ಶಾಕ್‌ ಕೊಟ್ಟಿದೆ. ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ಇಲ್ಲಿನ ಕೃಷಿ ಇಲಾಖೆ ಎಡಿ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ.

ಚಂದ್ರಕಾಂತ್‌ ಅವರಿಗೆ ಸೇರಿದ 2 ಮನೆ ಮತ್ತು ಚಿತ್ರದುರ್ಗದ ಕೃಷಿ ಇಲಾಖೆ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ಬೆಳ್ಳಂಬೆಳಗ್ಗೆ ದಾಳಿ ನಡೆಸಿದೆ. ತರಳಬಾಳು ನಗರ, ಹೊಳಲ್ಕೆರೆ ತಾಲೂಕಿನ ಟಿ ನುಲೇನೂರು ಗ್ರಾಮದ ಮನೆಗಳ ಮೇಲೆ ದಾಳಿ ನಡೆಸಿದ್ದು, ದಾಖಲೆಗಳ ಶೋಧ ನಡೆಸಿದ್ದಾರೆ.

ದಾವಣಗೆರೆಯಲ್ಲೂ ದಾಳಿ

ದಾವಣಗೆರೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಬ್ಬರು ಅಧಿಕಾರಿಗಳಿಗೆ ಸೇರಿದ 10ಕ್ಕೂ ಹೆಚ್ಚು ಸ್ಥಳಗಳಲ್ಲಿ ಆಸ್ತಿ ಪಾಸ್ತಿಗಳ ಮೇಲೆ ಏಕಕಾಲಕ್ಕೆ ದಾಳಿ ನಡೆದಿದೆ. ಕೆಆರ್ ಐಡಿಎಲ್ ಸಹಾಯಕ ಇಂಜಿನಿಯರ್ ಜಗದೀಶ್ ನಾಯ್ಕ ಹಾಗೂ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಎಸ್​ಡಿಎ ನಡುವಿನಮನೆ ಎಂಬುವವರ ನಿವಾಸಗಳ ಮೇಲೆ ದಾಳಿ​ ನಡೆದಿದೆ. ದಾವಣಗೆರೆ ಎಸ್ಪಿ ಎಂಎಸ್ ಕೌಲಾಪುರೆ ನೇತೃತ್ವದ ತಂಡ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.

ಹಾವೇರಿಯಲ್ಲಿ ಎರಡು ಕಡೆ ದಾಳಿ:

ಹಾವೇರಿ ಜಿಲ್ಲೆಯಲ್ಲಿ ಎರಡೂ ಕಡೆಗಳಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ಮಾಡಿದೆ. ರಾಣೇಬೆನ್ನೂರು ಪಟ್ಟಣದಲ್ಲೇ ಪ್ರತ್ಯೇಕ ಎರಡೂ‌ ಕಡೆಗಳಲ್ಲಿ ದಾಳಿ ಮಾಡಿದ್ದು, ಬಸವರಾಜ್ ಸೀಡೆನೂರು,ಅಶೋಕ್ ಅರಳೇಶ್ವರ ಮನೆ ಮೇಲೆ ರೇಡ್ ನಡೆಸಿದೆ.

ಸವಣೂರು ತಾಲೂಕು ಪಂಚಾಯತ್ ಇಓ ಬಸವರಾಜ್ ಸೀಡೆನೂರು ಅವರ ಬೀರೆಶ್ವರ ನಗರದಲ್ಲಿರೋ ಮನೆ ಮೇಲೆ ರೇಡ್ ನಡೆಸಿ ತನಿಖೆ ಕೈಗೊಂಡಿದ್ದಾರೆ. ರಾಣೇಬೆನ್ನೂರು ಕಂದಾಯ ನೀರಿಕ್ಷಕರು ಆಗಿರೋ ಅಶೋಕ್ ಅರಳೇಶ್ವರ ಅವರ ರಾಣೇಬೆನ್ನೂರು ಪಟ್ಟಣದಲ್ಲಿರುವ ಅಶೋಕ್ ಮನೆ ಸೇರಿದಂತೆ ಆತನ ಸಂಬಂಧಿಕರ ಮನೆ ಮೇಲೂ ರೇಡ್ ನಡೆದಿದೆ. ದಾಳಿ ವೇಳೆ ಹಲವು ಮಹತ್ತರ ಮಾಹಿತಿ ಕಲೆ ಹಾಕುತ್ತಿದ್ದಾರೆ.


Spread the love

LEAVE A REPLY

Please enter your comment!
Please enter your name here