HomeBelgaumಸ್ನ್ಯಾಕ್ಸ್ ಪ್ಯಾಕೆಟ್‌ನಲ್ಲಿ ಗಾಂಜಾ ಚಾಕ್ಲೆಟ್ ಇಟ್ಟು ಮಾರಾಟ: ಆರೋಪಿ ಅರೆಸ್ಟ್‌

ಸ್ನ್ಯಾಕ್ಸ್ ಪ್ಯಾಕೆಟ್‌ನಲ್ಲಿ ಗಾಂಜಾ ಚಾಕ್ಲೆಟ್ ಇಟ್ಟು ಮಾರಾಟ: ಆರೋಪಿ ಅರೆಸ್ಟ್‌

For Dai;y Updates Join Our whatsapp Group

ಬೆಳಗಾವಿ: ಸ್ನ್ಯಾಕ್ಸ್ ಪ್ಯಾಕೆಟ್‌ಗಳನ್ನೇ ಗಾಂಜಾ ಮಾರಾಟದ ಅಡ್ಡೆಯನ್ನಾಗಿ ಮಾಡಿಕೊಂಡಿದ್ದ ಆರೋಪಿಯನ್ನು ಉದ್ಯಮಬಾಗ ಪೊಲೀಸರು ಬಂಧಿಸಿದ್ದಾರೆ. ಕಾಲೇಜೊಂದರ ಸಮೀಪ ಸ್ನ್ಯಾಕ್ಸ್ ಪ್ಯಾಕೆಟ್‌ಗಳಲ್ಲಿ ಗಾಂಜಾ ತುಂಬಿಸಿ ಚಾಕ್ಲೆಟ್ ರೂಪದಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಭೋಲು ಪ್ರಜಾಪತಿ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಆರೋಪಿ ಗಾಂಜಾವನ್ನು ಚಾಕ್ಲೆಟ್ ರೂಪದಲ್ಲಿ ಪ್ಯಾಕ್ ಮಾಡಿ ಸ್ನ್ಯಾಕ್ಸ್ ಪ್ಯಾಕೆಟ್‌ಗಳಲ್ಲಿ ಬಚ್ಚಿಟ್ಟು ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ. ಈ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ಕಾಲೇಜು ಸಮೀಪ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಕಾರ್ಯಾಚರಣೆ ವೇಳೆ ₹54 ಸಾವಿರ ಮೌಲ್ಯದ 6 ಕೆಜಿ ಗಾಂಜಾ, ಒಂದು ಮೊಬೈಲ್ ಫೋನ್ ಹಾಗೂ ಸ್ಕೂಟಿಯನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ ಸುಮಾರು ₹94 ಸಾವಿರ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದ್ದು, ಉದ್ಯಮಬಾಗ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಗಾಂಜಾ ಮಾರಾಟದ ಜಾಲದಲ್ಲಿ ಇನ್ನೂ ಯಾರಾದರೂ ಭಾಗಿಯಾಗಿದ್ದಾರೆಯೇ ಎಂಬುದೂ ಸೇರಿದಂತೆ ಪ್ರಕರಣದ ವಿವಿಧ ಆಯಾಮಗಳಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img