ಬೆಂಗಳೂರು: ಕೋಣನಕುಂಟೆ ಪೊಲೀಸರು ಕಾರ್ಯಾಚರಣೆ ನಡೆಸಿ ಬೆಂಗಳೂರಲ್ಲಿ ಕಾಪರ್ ವೈರ್ ಕಳ್ಳತನಕ್ಕಾಗಿ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಅರ್ಬಾಜ್ ಪಾಷಾ ಬಂಧಿತ ಆರೋಪಿಯಾಗಿದ್ದು,
Advertisement
ಬೈಕ್ ಕದ್ದು ನಂತರ ಕಾಪರ್ ವೈರ್ ಕಳ್ಳತನ ಮಾಡುತ್ತಿದ್ದನು. ಸಿಲಿಕಾನ್ ಸಿಟಿಯಲ್ಲಿ ಒಂಟಿಯಾಗಿ ಇರುತ್ತಿದ್ದ ಬೈಕ್ ಗಳನ್ನು ಕಳ್ಳತನ ಮಾಡುತ್ತಿದ್ದನು.
ಈ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಕೋಣನಕುಂಟೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಆರೋಪಿಯಿಂದ ಒಟ್ಟು 3 ಲಕ್ಷ 50 ಸಾವಿರ ಬೆಲೆ ಬಾಳುವ ದ್ವಿಚಕ್ರ ವಾಹನಗಳನ್ನ ವಶಕ್ಕೆ ಪಡೆದುಕೊಂಡಿದ್ದಾರೆ.


