ಚಿತ್ರದುರ್ಗ: ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಚಿತ್ರದುರ್ಗದಲ್ಲಿ ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಪರಿಶೀಲನೆ ಮಾಡಿದ್ದಾರೆ.
ನಿರ್ಮಿತಿ ಕೇಂದ್ರದ ನಿವೃತ್ತ ಅಕೌಂಟೆಂಟ್ ಸುಶೀಲಮ್ಮ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಸುಶೀಲಮ್ಮ ಅವರು ಒಂದು ವರ್ಷದ ಹಿಂದೆ ವಿಆರ್ಎಸ್ ಪಡೆದಿದ್ದರು. ಅಕೌಂಟೆಂಟ್ ಆಗಿದ್ದ ವೇಳೆ ಆದಾಯಕ್ಕಿಂತ ಹೆಚ್ಚು ಹಣ ಮತ್ತು ಆಸ್ತಿ ಗಳಿಸಿರುವ ಆರೋಪ ಕೇಳಿ ಬಂದಿದೆ.
ಈ ಹಿನ್ನೆಲೆಯಲ್ಲಿ, ಚಿತ್ರದುರ್ಗದ ಮೆದೇಹಳ್ಳಿ ಬಡಾವಣೆ ಹಾಗೂ ಹಿರಿಯೂರು ತಾಲೂಕಿನ ಯಾದಲಘಟ್ಟ ಗ್ರಾಮದ ತೋಟದ ಮನೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ಮಾಡಿದ್ದಾರೆ.
ಲೋಕಾಯುಕ್ತ ಎಸ್ಪಿ ವಾಸು ದೇವರಾಮ್ ಮತ್ತು ಡಿವೈಎಸ್ಪಿ ಮೃತ್ಯುಂಜಯ ಅವರ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಇಂಚಿಂಚೂ ಮಾಹಿತಿ ಕಲೆ ಹಾಕುತ್ತಿದ್ದಾರೆ.



