ಅಕ್ರಮವಾಗಿ ಹಣ ಸಂಪಾದನೆ ಮಾಡಲು ಸುಲಿಗೆ ಮಾಡುತ್ತಿದ್ದ ಆರೋಪಿಗಳು ಅರೆಸ್ಟ್!

0
Spread the love

ಬೆಂಗಳೂರು: ಅಕ್ರಮವಾಗಿ ಹಣ ಸಂಪಾದನೆ ಮಾಡಲು ಸುಲಿಗೆ ಮಾಡುತ್ತಿದ್ದ ಆರೋಪಿಗಳನ್ನು ರಾಮಮೂರ್ತಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮುರುಗನ್, ಅನಿಲ್ ಕುಮಾರ್ ಹಾಗೂ ತೇಜಸ್ ಬಂಧಿತರಾಗಿದ್ದು, ರಾಮಮೂರ್ತಿನಗರ ಠಾಣಾ ವ್ಯಾಪ್ತಿಯಲ್ಲಿ ನೆಲೆಸಿದ್ದ ಮೂವರು ಆರೋಪಿಗಳು, ಸಣ್ಣಪುಟ್ಟ ಕೆಲಸ ಮಾಡಿಕೊಂಡಿದ್ದರು. ಕುಡಿತ ಹಾಗೂ ಸಿಗರೇಟ್ ವ್ಯಾಮೋಹಕ್ಕೆ ಅಂಟಿಕೊಂಡಿದ್ದ ಆರೋಪಿಗಳು ಅಕ್ರಮವಾಗಿ ಹಣ ಸಂಪಾದನೆ ಮಾಡಲು ಸುಲಿಗೆ ಮಾಡಲು ನಿರ್ಧರಿಸಿದ್ದರು.

Advertisement

ಜುಲೈ 7ರಂದು ಎನ್.ಆರ್.ಐ ಲೇಔಟ್​​​ನಲ್ಲಿ ದೂರುದಾರ ವ್ಯಕ್ತಿಯು ಸ್ನೇಹಿತನೊಂದಿಗೆ ದ್ವಿಚಕ್ರ ವಾಹನದಲ್ಲಿ ಹೋಗುವಾಗ ಅಡ್ಡಗಟ್ಟಿದ್ದರು. ವಾಚ್ ಹಾಗೂ ಮೊಬೈಲ್ ಕಸಿದಿದ್ದರು. ಬಳಿಕ ಬೆದರಿಸಿ ದೂರುದಾರರ ಫೋನ್ ಪೇಯಿಂದ 3700 ರೂಪಾಯಿ ಹಣ ಹಾಕಿಸಿಕೊಂಡು ಎಸ್ಕೇಪ್ ಆಗಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here