ಬೆಂಗಳೂರು: ಮೀಟರ್ ಬಡ್ಡಿ ಕಿರುಕುಳ ಹಾಗೂ ಸಾಲದ ಬಾಧೆಯಿಂದ ಬೇಸತ್ತು ಆಟೋ ಚಾಲಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಥಣಿಸಂದ್ರದಲ್ಲಿ ನಡೆದಿದೆ.
ಮೃತರನ್ನು ಜೀ ಯೌಸುಫ್ ಜಮಾಲ್ದ್ದಿನ್ ಎಂದು ಗುರುತಿಸಲಾಗಿದೆ. ಇಂದು ಸಂಜೆ ಸುಮಾರು 4 ಗಂಟೆ ವೇಳೆಗೆ ಈ ಘಟನೆ ನಡೆದಿದೆ.
ಆತ್ಮಹತ್ಯೆಗೂ ಮುನ್ನ ಯೌಸುಫ್ ಜಮಾಲ್ದ್ದಿನ್ ವಿಷ ಸೇವಿಸುವ ವಿಡಿಯೋ ಮಾಡಿ ಸ್ನೇಹಿತರಿಗೆ ಕಳುಹಿಸಿದ್ದಾನೆ. ವಿಡಿಯೋದಲ್ಲಿ ತಾನು ಮಾಡಿಕೊಂಡಿದ್ದ ಸಾಲ ಹಾಗೂ ಬಡ್ಡಿ ಹಣ ಪಾವತಿಸುವಂತೆ ನೀಡುತ್ತಿದ್ದ ಕಿರುಕುಳದ ಬಗ್ಗೆ ಉಲ್ಲೇಖಿಸಿದ್ದಾನೆ ಎನ್ನಲಾಗಿದೆ.
ಸಾಲದ ಒತ್ತಡದಿಂದಲೇ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.



