ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಆರ್ಸಿಬಿ ಆಟಗಾರ ಯಶ್ ದಯಾಳ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ. ಬಾಲಕಿಯೊಬ್ಬಳ ಮೇಲೆ 2 ವರ್ಷಗಳಿಂದ ಅತ್ಯಾಚಾರ ಎಸಗಿರುವ ಆರೋಪದ ಮೇಲೆ ಜೈಪುರದ ಸಂಗನೇರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಭಾವನಾತ್ಮಕವಾಗಿ ನನ್ನನ್ನ ಕಟ್ಟಿಹಾಕಿ, ಕ್ರಿಕೆಟ್ ವೃತ್ತಿ ಜೀವನದಲ್ಲಿ ಉತ್ತಮ ಅವಕಾಶ ಕೊಡಿಸುವುದಾಗಿ ಆಮಿಷ ಒಡ್ಡಿದ್ದಾನೆ. ಆಮಿಷ ಒಡ್ಡಿ 2 ವರ್ಷಗಳ ಕಾಲ ಪದೇ ಪದೇ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾಳೆ.
ಕ್ರಿಕೆಟ್ ವೃತ್ತಿಜೀವನದ ಬಗ್ಗೆ ಸಲಹೆ ನೀಡುವುದಾಗಿ, ಉತ್ತಮ ಭವಿಷ್ಯ ಕಲ್ಪಿಸುವುದಾಗಿ ಹೇಳಿದ್ದ ದಯಾಳ್ ಜೈಪುರದ ಸೀತಾಪುರ ಹೋಟೆಲ್ಗೆ ಕರೆದಿದ್ದ. ಅಲ್ಲಿ ಮೊದಲ ಬಾರಿಗೆ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ.
ಪ್ರಕರಣ ನಡೆದಾಗ ನನಗೆ 17 ವರ್ಷ ವಯಸ್ಸಾಗಿತ್ತು. ಅಲ್ಲಿಂದ 2 ವರ್ಷಗಳ ಕಾಲ ಪದೇ ಪದೇ ನನ್ನ ಮೇಲೆ ದೌರ್ಜನ್ಯ ಎಸಗಿದ್ದಾನೆ ಎಂದು ಸಂತ್ರಸ್ತೆ ಹೇಳಿಕೊಂಡಿದ್ದಾಳೆ. ಈ ಹಿನ್ನೆಲೆ ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.