ಬೆಳಗಾವಿ: ಬ್ಯಾಂಕ್‌ಗಳನ್ನೆ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಕಟಕೋಳ ಪೋಲಿಸರು ಬಂಧಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ಪಟ್ಟಣದಲ್ಲಿ ನಡೆದಿದೆ.ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹನಮುಸಾಗರ ಗ್ರಾಮದ ಹನಮಂತ ಗುಡೆನ್ನವರ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.
ಸವದತ್ತಿಯ ತಾಲೂಕಿನ ಮುನವಳ್ಳಿ ಪಟ್ಟಣದ ಮಹಾಲಕ್ಷ್ಮಿ ಕೋ ಆಪ್ ಕ್ರೆಡಿಟ್ ಸೊಸೈಟಿ ಬ್ಯಾಂಕ್, ರಾಮದುರ್ಗದ ನಾಲ್ಕು ಸೂಸೈಟಿಗಳಲ್ಲಿ 4.50 ಲಕ್ಷ ಕ್ಕಿಂತ ಹೆಚ್ಚಿನ ಹಣವನ್ನು ಕಳ್ಳತನ ಮಾಡಿದ್ದನು. ಪ್ರಕರಣ ದಾಖಲಿಸಿಕೊಂಡು ತನಿಖೆಗಿಳಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಸ್ಥಳ ಮಹಜರು ಮಾಡುವ ಮೂಲಕ ತನಿಖೆ ಮುಂದುವರೆಸಿದ್ದಾರೆ.



