ಹಾವೇರಿ:- ಬಾಲಿವುಡ್ ಸ್ಟಾರ್ ನಟ ಸಲ್ಮಾನ್ ಖಾನ್‌ಗೆ ಕೊಲೆ ಬೆದರಿಕೆ ಹಾಕಿದ ಆರೋಪಿಯನ್ನು ಹಾವೇರಿಯಲ್ಲಿ ಅರೆಸ್ಟ್ ಮಾಡಲಾಗಿದೆ.
Advertisement
ಬಂಧಿತ ಆರೋಪಿಯನ್ನು ರಾಜಸ್ತಾನ ಮೂಲದ ಬಿಕಾರಾಮ್ ಎಂದು ಗುರುತಿಸಲಾಗಿದೆ. ರಾಜಸ್ತಾನ ಮೂಲದ ಬಿಕಾರಾಮ್ ಕೂಲಿ ಕೆಲಸಕ್ಕೆಂದು ಇತ್ತೀಚೆಗೆ ಹಾವೇರಿ ನಗರಕ್ಕೆ ಬಂದಿದ್ದರು. ಇಲ್ಲಿನ ಗೌಡರ ಓಣಿಯಲ್ಲಿ ರೂಮ್‌ವೊಂದರಲ್ಲಿ ಕೂಲಿಕಾರರೊಂದಿಗೆ ವಾಸವಾಗಿದ್ದ. ಅಲ್ಲದೇ ಗ್ರಿಲ್ ಕೆಲಸ ಮಾಡಿಕೊಂಡಿದ್ದ.
ಮುಂಬೈ ಪೊಲೀಸರ ಮಾಹಿತಿ ಆಧಾರದಲ್ಲಿ ಆರೋಪಿಯನ್ನು ಜಿಲ್ಲಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಳಿಕ ಆರೋಪಿಯನ್ನು ಮುಂಬೈ ಪೊಲೀಸರಿಗೆ ಒಪ್ಪಿಸಲಾಗಿದೆ.
ಬಿಕಾರಾಮ್ ಈ ಮೊದಲು ಬೇರೆಡೆ ಕೆಲಸ ಮಾಡುತ್ತಿದ್ದ. ಬಳಿಕ ಒಂದೂವರೆ ತಿಂಗಳ ಹಿಂದೆ ಕೂಲಿಗಾಗಿ ಹಾವೇರಿಗೆ ಬಂದಿದ್ದ ಎಂದು ತಿಳಿದು ಬಂದಿದೆ. ಇದೀಗ ಮುಂಬೈ ಪೊಲೀಸರ ಮಾಹಿತಿ ಆಧಾರದ ಮೇಲೆ ಹಾವೇರಿ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.