ಲಕ್ನೋ:-ಅನಾರೋಗ್ಯದಿಂದ ಬಳಲುತ್ತಿದ್ದ ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್ ಅವರು ತಮ್ಮ 85 ನೇ ವಯಸ್ಸಿಗೆ ನಿಧನ ಹೊಂದಿದ್ದಾರೆ.
Advertisement
ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಲಕ್ನೋದ ಪಿಜಿಐನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಫೆಬ್ರವರಿ 3 ರಂದು ಪಾರ್ಶ್ವವಾಯುವಿಗೆ ಒಳಗಾದ ನಂತರ ಅವರನ್ನು ಗಂಭೀರ ಸ್ಥಿತಿಯಲ್ಲಿ ನರವಿಜ್ಞಾನ ವಾರ್ಡ್‌ನ HDU ಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಇಹಲೋಕ ತ್ಯಜಿಸಿದರು.
ಸತ್ಯೇಂದ್ರ ದಾಸ್ ಅವರು ಪಾರ್ಶ್ವವಾಯುದಿಂದ ಬಳಲುತ್ತಿದ್ದರು. ಜತೆಗೆ, ಮಧುಮೇಹ ಮತ್ತು ರಕ್ತದೊತ್ತಡ ಹೆಚ್ಚಾಗಿದ್ದು, ನ್ಯೂರಾಲಜಿ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ಸತ್ಯೇಂದ್ರ ದಾಸ್ 1992ರ ಡಿಸೆಂಬರ್ 6ರಂದು ಬಾಬರಿ ಮಸೀದಿಯನ್ನು ಕೆಡವಿದಾಗ ತಾತ್ಕಾಲಿಕ ರಾಮ ಮಂದಿರದ ಅರ್ಚಕರಾಗಿದ್ದರು ಎನ್ನಲಾಗಿದೆ.