ವಿಜಯಸಾಕ್ಷಿ ಸುದ್ದಿ, ಹಗರಿಬೊಮ್ಮನಹಳ್ಳಿ: ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಸಾಧನೆ ಮಾಡಿ ಉನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಎಂದು ಅಮ್ಮನಗರ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷೆ ಡಾ. ಸಾಹಿರಾಬಾನು ಕರೆ ನೀಡಿದರು.
ವಿದ್ಯಾರ್ಥಿಗಳು ಶಿಕ್ಷಣದಲ್ಲಿ ಸಾಧನೆ ಮಾಡಿ ಉನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು ಎಂದು ಅಮ್ಮನಗರ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಅಧ್ಯಕ್ಷೆ ಡಾ. ಸಾಹಿರಾಬಾನು ಕರೆ ನೀಡಿದರು.
ಪಟ್ಟಣದ ಕನ್ಯಕಾಪರಮೇಶ್ವರಿ ಕಲ್ಯಾಣ ಮಂಟಪದಲ್ಲಿ ಹಗರಿಬೊಮ್ಮನಹಳ್ಳಿ ತಾಲೂಕು ಖಿದ್ಮತ್ ಕಮಿಟಿ ವತಿಯಿಂದ ಆಯೋಜಿಸಿದ್ದ ಪ್ರಥಮ ವರ್ಷದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.
“ಬಹುತೇಕ ಮುಸ್ಲಿಮರು ಕಾಯಕನಿಷ್ಠರು. ದುಡಿಮೆಯೊಂದಿಗೆ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು. ನಾವು ಮಾಡುವ ಕಾಯಕ ಮತ್ತು ಸೇವೆಯಲ್ಲಿಯೇ ದೇವರು ಅಡಗಿದ್ದಾನೆ.” ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲೂಕು ಖಿದ್ಮತ್ ಕಮಿಟಿ ಅಧ್ಯಕ್ಷ ಎಚ್. ಜಂದಿಸಾಹೇಬ್ ಮಾತನಾಡಿ, ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಗೌರವಿಸುವ ಮೂಲಕ ಇತರ ವಿದ್ಯಾರ್ಥಿಗಳಿಗೂ ಪ್ರೇರಣೆ ನೀಡುವುದು ಪುರಸ್ಕಾರದ ಉದ್ದೇಶವಾಗಿದೆ. ತಾಲೂಕಿನ ವಿವಿಧ ಗ್ರಾಮಗಳಿಗೆ ತೆರಳಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸಲಾಗುತ್ತಿದೆ. ಪರಸ್ಪರ ಸಹಕಾರದಿಂದ ಮಾತ್ರ ಇಂತಹ ಉತ್ತಮ ಕಾರ್ಯಗಳು ಸಾಧ್ಯ ಎಂದರು.
ಪುರಸಭೆಯ ಮಾಜಿ ಅಧ್ಯಕ್ಷ ಎಂ. ಮರಿರಾಮಪ್ಪ ಮಾತನಾಡಿ, ವಿದ್ಯಾರ್ಥಿಗಳು ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಆದರ್ಶಗಳನ್ನು ಅಳವಡಿಸಿಕೊಂಡು ಪರಿಶ್ರಮದ ಮೂಲಕ ಉನ್ನತ ಗುರಿ ಸಾಧಿಸಿ ದೇಶಕ್ಕೆ ಕೊಡುಗೆ ನೀಡಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿವಿಧ ಗ್ರಾಮಗಳ 100 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ಉಪ ತಹಸೀಲ್ದಾರ್ ಆಸೀಫ್, ನಿವೃತ್ತ ಯೋಧರಾದ ನೂರ್ ಮಹಮ್ಮದ್ ಹಾಗೂ ರಾಮರೆಡ್ಡಿ ಅವರನ್ನು ಸನ್ಮಾನಿಸಲಾಯಿತು.
ಪುರಸಭೆ ಅಧ್ಯಕ್ಷೆ ರೇಷ್ಮಾ ಸಿಕಂದರ್ ಕಾರ್ಯಕ್ರಮ ಉದ್ಘಾಟಿಸಿದರು.
ವೇದಿಕೆಯಲ್ಲಿ ಪುರಸಭೆ ಸದಸ್ಯ ಪವಾಡಿ ಹನುಮಂತಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಅಕ್ಕಿ ತೋಟೇಶ್, ಗ್ಯಾರಂಟಿ ಸಮಿತಿಯ ಗುರುಬಸವರಾಜ ಸೊನ್ನದ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಹಾಲ್ದಾಳ್ ವಿಜಯಕುಮಾರ್ ಮಾತನಾಡಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಚಿಂತ್ರಪಳ್ಳಿ ದೇವೇಂದ್ರಪ್ಪ, ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಕೋರಿ ಗೋಣಿಬಸಪ್ಪ, ರಫೀ, ಆಟೊ ರಾಜ, ಮೆಕಾನಿಕ್ ರಾಜು, ಬುಡೇನ್ ಸಾಬ್, ಚಾಂದ್ ಬಾಷಾ, ಬಿ. ಬಾಷಾಸಾಬ್, ಹಸನ್ ಷರೀಫ್, ಟೈಲರ್ ಶಬೀರ್, ಎನ್.ಎಂ. ಗೌಸ್, ನಜೀರ್ ಬಾಷಾ, ಎಚ್.ಎಸ್. ದಾದಾಪೀರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಎಚ್. ಅನೀಸ್ ಕಾರ್ಯಕ್ರಮ ನಿರ್ವಹಿಸಿದರು.
“ವಿದ್ಯಾರ್ಥಿಗಳು ಶೈಕ್ಷಣಿಕ ಪ್ರಗತಿ ಸಾಧಿಸಿ ಉನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ಸಮಾಜಕ್ಕೆ ಮಾದರಿಯಾಗಬೇಕು.”
ಡಾ. ಸಾಹಿರಾಬಾನು, ಅಧ್ಯಕ್ಷೆ, ಅಮ್ಮನಗರ ಗ್ರಾಮೀಣ ಅಭಿವೃದ್ಧಿ ಸಂಸ್ಥೆ



