ನಿಗದಿಪಡಿಸಿದ ಸಮಯದಲ್ಲಿ ಗುರಿ ಸಾಧಿಸಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉಪಹಂಚಿಕೆ ಯೋಜನೆಯಡಿ ಅನುಷ್ಠಾನಿತ ಕಾಮಗಾರಿಗಳ ಆರ್ಥಿಕ ಹಾಗೂ ಭೌತಿಕ ಗುರಿಯನ್ನು ನಿಗದಿತ ಕಾಲಮಿತಿಯಲ್ಲಿಯೇ ಸಾಧಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.

Advertisement

ಜಿಲ್ಲಾಡಳಿತ ಭವನದ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಎಸ್.ಸಿ.ಎಸ್.ಪಿ. ಹಾಗೂ ಟಿ.ಎಸ್.ಪಿ. ಯೋಜನೆಯಡಿ ಜರುಗಿದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಸ್‌ಸಿ ಎಸ್‌ಟಿ ಕಾಲೋನಿಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಾಗ ಗುಣಮಟ್ಟದ ಕಡೆಗೂ ನಿಗಾ ವಹಿಸಬೇಕು. ಇಲಾಖೆಯ ಅಧಿಕಾರಿಗಳು ಕಡ್ಡಾಯವಾಗಿ ಸಭೆಗೆ ಹಾಜರಾಗಬೇಕು. ಆಯಾ ಆರ್ಥಿಕ ಸಾಲಿನಲ್ಲಿ ಅನುಷ್ಠಾನಿತ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವತ್ತ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು. ಯಾವುದೇ ಕಾರಣಕ್ಕೂ ಬಿಡುಗಡೆಯಾದ ಅನುದಾನ ಲ್ಯಾಪ್ಸ್ ಆಗದಂತೆ ನೋಡಿಕೊಳ್ಳಬೇಕು ಎಂದರು.

ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ನಂದಾ ಹಣಬರಟ್ಟಿ ಅವರು ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿ ವಿವಿಧ ಇಲಾಖೆಗಳು ಸಾಧಿಸಿದ ಪ್ರಗತಿ ವರದಿಯನ್ನು ಸಭೆಯಲ್ಲಿ ವಿವರಿಸಿದರು.

ಈ ಸಂದರ್ಭದಲ್ಲಿ ಜಿ.ಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೋಟೂರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ, ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಬಿ. ಮಸನಾಯಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಪದ್ಮಾವತಿ ಜಿ, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಕೊಟ್ರೇಶ ವಿಭೂತಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ.ಆರ್ ಮಾತನಾಡಿ, ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿ ಬಿಡುಗಡೆಯಾದ ಅನುದಾನ ಯಾವುದೇ ಕಾರಣಕ್ಕೂ ದುರ್ಬಳಕೆಯಾಗದಂತೆ ನೋಡಿಕೊಳ್ಳಬೇಕು. ಅರ್ಹ ಫಲಾನುಭವಿಗಳಿಗೆ ಯೋಜನೆಯ ಸೌಲಭ್ಯ ನಿಗದಿತ ಅವಧಿಯೊಳಗೆ ಒದಗಿಸಲು ಕ್ರಮ ವಹಿಸಬೇಕು ಎಂದರು.


Spread the love

LEAVE A REPLY

Please enter your comment!
Please enter your name here