ವಿಜಯಸಾಕ್ಷಿ ಸುದ್ದಿ, ಗದಗ: ಕಳಸಾಪುರ ರಸ್ತೆಯಲ್ಲಿರುವ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಜರುಗಿದ ರಾಷ್ಟ್ರಮಟ್ಟದ 4ನೇ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಸ್ಥಳೀಯ ಶ್ರೀ ಪಾರ್ಶ್ವನಾಥ ಆಂಗ್ಲ ಮಾಧ್ಯಮ ಶಾಲೆಯ ಕ್ರೀಡಾಪಟುಗಳಾದ ಸಂಪ್ರೀತ್ ಪಿ.ಹೂಗಾರ್ ಕಟಾದಲ್ಲಿ ದ್ವಿತೀಯ, ಕುಮಿಟೆಯಲ್ಲಿ ತೃತೀಯ, ವಿರೂಪಾಕ್ಷಿ ಕೆ.ಹೊಂಬಾಳಿ ಕುಮಿಟೆಯಲ್ಲಿ ದ್ವಿತೀಯ, ಕಟಾದಲ್ಲಿ ದ್ವಿತೀಯ, ಅಮೈರಾ ಮುಲ್ಲಾ ಕಟಾದಲ್ಲಿ ಪ್ರಥಮ, ವೇದಸಾಯಿ ವಿ.ಪುಪ್ತಿ ಕಟಾದಲ್ಲಿ ತೃತೀಯ, ಯಜ್ಞ ಸಾಯಿ ವಿ.ಪುಪ್ತಿ ತೃತೀಯ ಸ್ಥಾನ ಹಾಗೂ ಭರತ್ ಇರಾಳ್ ಸಮಾಧಾನಕರ ಪ್ರಶಸ್ತಿ ಪಡೆದಿದ್ದಾರೆ.
ಸಾಧಕ ವಿದ್ಯಾರ್ಥಿಗಳಿಗೆ ಹಾಗೂ ತರಬೇತುದಾರರಾದ ಆಸೀಫ್ ಅ.ಕದಡಿ ಅವರಿಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು ಹಾಗೂ ಪಾಲಕರು ಅಭಿನಂದಿಸಿದ್ದಾರೆ.



