ವಿಜಯಸಾಕ್ಷಿ ಸುದ್ದಿ, ಗದಗ: ನಗರದ ಮಹಾವೀರ ಜೈನ ಪ್ರೌಢಶಾಲೆಯ ವಿದ್ಯಾರ್ಥಿಗಳು ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಸ್ಕೇಟಿಂಗ್ ಸ್ಪರ್ಧೆ ಹಾಗೂ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿದ್ದಾರೆ.
ಬೆಂಗಳೂರಿನ ಶಾಲಾ ಕ್ರೀಡಾ ಇಲಾಖೆಯು ಆಯೋಜಿಸಿದ್ದ ರಾಜ್ಯ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ಸಿರಿ ಮಂಜುನಾಥ ಕುರಿ ಹಾಗೂ ಅನನ್ಯ ಕುರಿ 2 ಬೆಳ್ಳಿಯ ಪದಕ ಹಾಗೂ 1 ಕಂಚಿನ ಪದಕ ಗಳಿಸಿ ಪ್ರತಿಭೆ ಮೆರೆದಿದ್ದಾರೆ.
ನಂತರ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಸಿರಿ ಕುರಿ ಆಯ್ಕೆಯಾಗಿದ್ದು, ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾಳೆ. ಕ್ರೀಡಾಪಟುಗಳು ಹಾಗೂ ತರಬೇತಿ ನೀಡಿದ ಮಂಜುನಾಥ ಕುರಿಯವರನ್ನು ಮಹಾವೀರ ಜೈನ ಪ್ರೌಢಶಾಲೆಯ ಆಡಳಿತ ಮಂಡಳಿ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಎನ್.ಆರ್. ನಿಡಗುಂದಿ, ಜಿಲ್ಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರಡಿ ಅಭಿನಂದಿಸಿದ್ದಾರೆ.



