ವಿಜಯಸಾಕ್ಷಿ ಸುದ್ದಿ, ಗದಗ: 2020–21ರ ಶೈಕ್ಷಣಿಕ ವರ್ಷದಲ್ಲಿ ಸನ್ಮಾರ್ಗ ಕಾಲೇಜಿನಲ್ಲಿ ವಿದ್ಯಾರ್ಜನೆಗೈದು ಇದೀಗ ಅಮೆಜಾನ್ ವೆಬ್ ಸರ್ವೀಸಸ್ ಕಂಪನಿಯಲ್ಲಿ ವರ್ಷಕ್ಕೆ 22 ಲಕ್ಷ ರೂ ಪ್ಯಾಕೇಜ್‌ನ ಉದ್ಯೋಗವನ್ನು ಗಿಟ್ಟಿಸಿಕೊಂಡಿರುವ ಸುಮನ್ ಪಾಟೀಲರನ್ನು ಕಾಲೇಜಿನ ವತಿಯಿಂದ ಅಭಿನಂದಿಸಲಾಯಿತು.
ವಿದ್ಯಾರ್ಥಿನಿಯ ಈ ಅಮೋಘ ಸಾಧನೆಗೆ ಸಂಸ್ಥೆಯ ಚೇರ್‌ಮನ್ ಪ್ರೊ. ರಾಜೇಶ ಕುಲಕರ್ಣಿ, ಪ್ರಾಚಾರ್ಯ ಪ್ರೇಮಾನಂದ ರೋಣದ, ನಿರ್ದೇಶಕರಾದ ಪ್ರೊ. ರಾಹುಲ ಒಡೆಯರ್, ಪ್ರೊ. ರೋಹಿತ್ ಒಡೆಯರ್, ಪ್ರೊ. ಪುನೀತ್ ದೇಶಪಾಂಡೆ, ಪ್ರೊ. ಸೈಯ್ಯದ್ ಮತೀನ್ ಮುಲ್ಲಾ, ಆಡಳಿತಾಧಿಕಾರಿ ಎಮ್.ಸಿ. ಹಿರೇಮಠ ಹಾಗೂ ಕಾಲೇಜಿನ ಸಮಸ್ತ ಬೋಧಕ-ಬೋಧಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.



