ಯೋಗ ಡಿಪ್ಲೋಮಾದಲ್ಲಿ ಬಸವ ಯೋಗ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಸಾಧನೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಇವರು ಅಗಸ್ಟ್-2024ರಲ್ಲಿ ನಡೆಸಿದ ಪಿ.ಜಿ. ಡಿಪ್ಲೋಮಾ ಇನ್ ಯೋಗ ಸ್ಟಡೀಸ್ ಕೋರ್ಸ್ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆಯಲ್ಲಿ  ಎಸ್.ವಾಯ್.ಬಿ.ಎಂ.ಎಸ್. ಯೋಗ ಪಾಠಶಾಲೆಯ ಬಸವ ಯೋಗ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ರೂಪಾ ಕೆ.ಸಂತಿ (867) ಪ್ರಥಮ, ಮಹಮ್ಮದರಫಿ ಅಂಗಡಿ (849) ದ್ವಿತೀಯ, ದೀಪಾ ಜೋಶಿ (848) ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

Advertisement

ಸಾಧಕ ವಿದ್ಯಾರ್ಥಿಗಳಿಗೆ ಮತ್ತು ಶ್ರಮಿಸಿದ ಸಿಬ್ಬಂದಿ ವೃಂದದವರೆಲ್ಲರಿಗೂ ಬಸವ ಯೋಗ ಮಹಾವಿದ್ಯಾಲಯದ ಮಹಾಪೋಷಕರಾಗಿರುವ ಪೂಜ್ಯಶ್ರೀ ಜಗದ್ಗುರು ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು, ಚೇರಮನ್ ಪ್ರೊ. ಎಸ್.ವಿ. ಸಂಕನೂರ, ಆಡಳಿತಾಧಿಕಾರಿ ಪ್ರೊ. ಎಸ್.ಎಸ್. ಪಟ್ಟಣಶೆಟ್ಟಿ, ಮ್ಯಾನೇಜರ್ ಎಂ.ಎಸ್. ಅಂಗಡಿ, ಪ್ರಾಚಾರ್ಯ ಕೆ.ಎಸ್. ಪಲ್ಲೇದ, ಅಲ್ಯುಮಿನಿ ಅಸೋಸಿಯೇಷನ್ ಅಧ್ಯಕ್ಷ ಡಾ. ಆಯ್.ಬಿ. ಕೊಟ್ಟೂರಶೆಟ್ಟಿ, ಬಸವ ಯೋಗ ಚಿಂತನ ಕೂಟದ ಅಧ್ಯP್ಷÀ ಎಂ.ಎಸ್. ಶಿರಿಯಣ್ಣವರ, ಸದಸ್ಯ ಡಾ. ಎಂ.ವಿ. ಐಹೊಳ್ಳಿ ಅಭಿನಂದಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here