HomeEducationಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಸಾಧನೆ

ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಸಾಧನೆ

Spread the love

ವಿಜಯಸಾಕ್ಷಿ ಸುದ್ದಿ, ನರೇಗಲ್ಲ : ಪಟ್ಟಣದ ಶ್ರೀ ಕೃಷ್ಣಾಜಿ ರಂಗರಾವ್ ಕುಲಕರ್ಣಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಶ್ರವಣಕುಮಾರ ಗೂಳಪ್ಪನವರ ಹಾಗೂ ಫಾರೂಕ್ ಗಡಾದ ರಾಜ್ಯ ಮಟ್ಟದ ಇನ್‌ಸ್ಪೈರ್ ಅವಾರ್ಡ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ ಎಂದು ಮುಖ್ಯೋಪಾಧ್ಯಾಯ ಎಸ್.ಬಿ. ನಿಡಗುಂದಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸತತ ಎರಡನೇ ಬಾರಿಗೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದ ಸ್ಪರ್ಧೆಗೆ ವಿದ್ಯಾರ್ಥಿಗಳು ಆಯ್ಕೆಯಾಗುವಲ್ಲಿ ಮಾರ್ಗದರ್ಶನ ನೀಡಿದ ಶಾಲೆಯ ವಿಜ್ಞಾನ ಶಿಕ್ಷಕಿ ಮಂಜುಳಾ ಜಾಧವ ಅವರನ್ನು ಮತ್ತು ಸಾಧನೆಗೈದ ವಿದ್ಯಾರ್ಥಿಗಳನ್ನು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಆನಂದರಾವ್ ಕುಲಕರ್ಣಿ, ಮುಖ್ಯೋಪಾಧ್ಯಾಯರು ಮತ್ತು ಸಿಬ್ಬಂದಿಯವರು ಅಭಿನಂದಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!