ವಿಜಯಸಾಕ್ಷಿ ಸುದ್ದಿ, ಗದಗ : ಇಲ್ಲಿನ ಬಸವೇಶ್ವರ ಪದವಿಪೂರ್ವ ಮಹಾವಿದ್ಯಾಲಯದ ಕ್ರೀಡಾಂಗಣದಲ್ಲಿ ಬುಧವಾರ ನಡೆದ 2024-25ನೇ ಸಾಲಿನ ಗದಗ ಶಹರ ವಲಯದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಬಾಲಕಿಯರ ವಿಭಾಗದ ಕಬ್ಬಡ್ಡಿ ಕ್ರೀಡೆಯಲ್ಲಿ ಮತ್ತು ಬಾಲಕಿಯರ ಪ್ರೌಢಶಾಲಾ ವಿಭಾಗದ ವಾಲಿಬಾಲ್ ಪಂದ್ಯಾವಳಿಯಲ್ಲಿ ಮಲ್ಲಸಮುದ್ರದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ವಸತಿ ಶಾಲೆ ವಿದ್ಯಾರ್ಥಿನಿಯರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆಯಾಗಿದ್ದಾರೆ.
Advertisement
ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ಅಮಿತ ಬಿದರಿ, ಪ್ರಾಚಾರ್ಯರಾದ ಮಂಜುಳಾ ಎಸ್.ಆರಿಕಟ್ಟಿ ಹಾಗೂ ಸಿಬ್ಬಂದಿ ವರ್ಗದವರು ಸಾಧನೆಗೈದ ವಿದ್ಯಾರ್ಥಿಗಳಿಗೆ ಹಾಗೂ ದೈಹಿಕ ಶಿಕ್ಷಣ ಶಿಕ್ಷಕಿ ಗಿರಿಜಾ ರಾಮಣ್ಣನವರ ಇವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.