ವಿಜಯಸಾಕ್ಷಿ ಸುದ್ದಿ, ಗದಗ: ಇತ್ತೀಚೆಗೆ ಶಿವಮೊಗ್ಗದಲ್ಲಿ ನಡೆದ ಅಂತಾರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ಅಣ್ಣಿಗೇರಿ ತಾಲೂಕಿನ ನಲವಡಿಯ ಶ್ರೀ ವಿವೇಕಾನಂದ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ತಮ್ಮ ಅದ್ಭುತ ಕೌಶಲ್ಯದಿಂದ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
Advertisement
ಕರಾಟೆ ವಿದ್ಯಾರ್ಥಿಗಳಾದ ಪ್ರವೀಣ ಶಿರಿಯಮ್ಮನವರ (ಪ್ರಥಮ), ಭರತ ದೊಡ್ಡಮನಿ (ಪ್ರಥಮ), ಹನುಮಂತಗೌಡ ಪಾಟೀಲ (ಪ್ರಥಮ) ಹಾಗೂ ಸುಬ್ರಹ್ಮಣ್ಯ ಕಬನೂರ (ತೃತೀಯ) ಸ್ಥಾನ ಗಳಿಸುವ ಮೂಲಕ ಶಾಲೆಯ ಕೀರ್ತಿಯನ್ನು ರಾಷ್ಟ್ರಮಟ್ಟದಲ್ಲಿ ಗುರುತಿಸಿದ್ದಾರೆ.
ಸಂಸ್ಥೆಯ ಅಧ್ಯಕ್ಷರು, ಕಾರ್ಯದರ್ಶಿಗಳು, ಸರ್ವ ಪದಾಧಿಕಾರಿಗಳು, ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಎಲ್ಲಾ ಶಿಕ್ಷಕ ವೃಂದದವರು ಸಾಧನೆಗೈದ ವಿದ್ಯಾರ್ಥಿಗಳನ್ನು ಹಾರ್ದಿಕವಾಗಿ ಅಭಿನಂದಿಸಿ ಶುಭ ಹಾರೈಸಿದ್ದಾರೆ.