ಸನ್ಮಾರ್ಗ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿ ಪೂರ್ವ) ಗದಗ, ತೋಂಟದ ಸಿದ್ದೇಶ್ವರ ವಿಜ್ಞಾನ ವಾಣಿಜ್ಯ ಹಾಗೂ ಕಲಾ ಪದವಿ ಪೂರ್ವ ಮಹಾವಿದ್ಯಾಲಯ ಗದಗ ಇವರ ಸಹಯೋಗದಲ್ಲಿ ಜರುಗಿದ ಗದಗ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಕ್ರೀಡಾಕೂಟದಲ್ಲಿ ಗದಗಿನ ಸನ್ಮಾರ್ಗ ಪ.ಪೂ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿಗಳ ಉತ್ತಮ ಸಾಧನೆ ಮಾಡಿದ್ದಾರೆ.

Advertisement

ಖುಷಿ ವೆರ್ಣೆಕರ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ, ಮನ್ವಿತಾ ಬಡ್ನಿ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ, ತಹನಾಜ್ ಬಳ್ಳಾರಿ ಕರಾಟೆ ಸ್ಪರ್ಧೆಯಲ್ಲಿ ದ್ವಿತೀಯ, ಶಿವಯೋಗಿ ಕಮತರ ಕ್ರಾಸ್‌ಕಂಟ್ರಿ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸಾಧಕ ವಿದ್ಯಾರ್ಥಿಗಳನ್ನು ಮಹಾವಿದ್ಯಾಲಯದ ಚೇರ್ಮನ್ ಪ್ರೊ. ರಾಜೇಶ ಕುಲಕರ್ಣಿ, ಪ್ರಾಚಾರ್ಯ ಪ್ರೊ. ಪ್ರೇಮಾನಂದ ರೋಣದ, ಆಡಳಿತಾಧಿಕಾರಿ ಎಮ್.ಸಿ. ಹಿರೇಮಠ, ನಿರ್ದೇಶಕರುಗಳಾದ ಪ್ರೊ. ರೋಹಿತ ಒಡೆಯರ್, ಪ್ರೊ. ಪುನೀತ್ ದೇಶಪಾಂಡೆ, ಪ್ರೊ. ಸೈಯದ ಮತೀನ್ ಮುಲ್ಲಾ, ಪ್ರೊ. ರಾಹುಲ್ ಒಡೆಯರ್ ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಎಲ್ಲ ವಿಜೇತರನ್ನು ಅಭಿನಂದಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here