ಶ್ರೀರಾಮಕರುಣಾನಂದ ಶಾಲೆಯ ವಿದ್ಯಾರ್ಥಿಗಳ ಸಾಧನೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: 2024-25ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಇಲ್ಲಿನ ಬಿಂಕದಕಟ್ಟಿಯ ಶ್ರೀರಾಮಕರುಣಾನಂದ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

Advertisement

ಶಾಲೆಯ ವಿದ್ಯಾರ್ಥಿಗಳಾದ ಮಿನಾಜ್ ಸೊನ್ನೆಖಾನ್ ಶೇ. 91.68 ಅಂಕಗಳನ್ನು ಪಡೆದು ಶಾಲೆಗೆ ಪ್ರಥಮ ಸ್ಥಾನವನ್ನು ಪಡೆದಿದ್ದಾಳೆ. ಮನು ಭೂಮಕ್ಕನವರ್ ಶೇ. 91.34 ಅಂಕಗಳೊಂದಿಗೆ ಶಾಲೆಗೆ ದ್ವಿತೀಯ ಸ್ಥಾನವನ್ನು ಹಾಗೂ ಸಬಿಯಾ ಗೂಳಗುಂದಿ ಶೇ. 84.68 ಅಂಕಗಳನ್ನು ಪಡೆದು ಶಾಲೆಗೆ ತೃತೀಯ ಸ್ಥಾನವನ್ನು ಪಡೆದಿದ್ದಾಳೆ.

ಬಾಲಕರ ವಿಭಾಗದಲ್ಲಿ ವರುಣ ಉಮಚಗಿ ಶೇ. 83.2 ಅಂಕಗಳನ್ನು ಪಡೆದು ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ. ಸಾಧಕ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ಮಂಡಳಿಯವರು, ಪ್ರಾಂಶುಪಾಲರು, ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here