HomeGadag Newsಯೋಗದಿಂದ ಮಾನಸಿಕ, ದೈಹಿಕ ಆರೋಗ್ಯ ಪ್ರಾಪ್ತಿ

ಯೋಗದಿಂದ ಮಾನಸಿಕ, ದೈಹಿಕ ಆರೋಗ್ಯ ಪ್ರಾಪ್ತಿ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಪ್ರತಿಯೊಬ್ಬರೂ ಆರೋಗ್ಯಯುತ ಜೀವನ ನಿರ್ವಹಣೆ ಮಾಡಲು ಯೋಗಾಭ್ಯಾಸ ಸಹಕಾರಿಯಾಗುತ್ತದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.

ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ‘ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ’ ಎಂಬ ಘೋಷವಾಕ್ಯದೊಂದಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ನಗರಸಭೆ ಗದಗ-ಬೆಟಗೇರಿ ಇವರುಗಳ ಸಂಯುಕ್ತ ಆಶ್ರಯದಲ್ಲಿ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಆರೋಗ್ಯವಂತ ದೇಹದಂತೆಯೇ ಆರೋಗ್ಯಯುತ ಮನಸ್ಸು ಕೂಡ ಮುಖ್ಯವಾಗಿದೆ. ಪ್ರತಿಯೊಬ್ಬರೂ ಯೋಗವನ್ನು ಶಿಸ್ತಿನಿಂದ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಮನುಷ್ಯನು ದೈಹಿಕ, ಮಾನಸಿಕ, ಆಧ್ಯಾತ್ಮಿಕ ಸದೃಡತೆ ಹೊಂದಬೇಕಾದರೆ ಅದನ್ನು ಯೋಗದಿಂದ ಪಡೆಯಬಹುದಾಗಿದೆ. ಬ್ರಾಹ್ಮೀ ಮುಹೂರ್ತದಲ್ಲಿ ಯೋಗವನ್ನು ಯೋಗಾಭ್ಯಾಸ ಮಾಡುವುದರಿಂದ ಆರೋಗ್ಯಯುತ ಜೀವನ ನಡೆಸಬಹುದಾಗಿದೆ ಎಂದರು.

ಜಿಲ್ಲಾ ಆಯುಷ್ ಇಲಾಖೆ ಅಧಿಕಾರಿ ಡಾ. ಜಯಪಾಲಸಿಂಗ ಪಿ.ಸಮೋರೆಕರ ಸ್ವಾಗತಿಸಿ ಮಾತನಾಡಿ, ಯೋಗವು ಭಾರತದ ಪ್ರಾಚೀನ ಸಂಸ್ಕೃತಿಯ ಅಮೂಲ್ಯ ಕೊಡುಗೆಯಾಗಿದ್ದು, ಇದನ್ನು ಜಗತ್ತಿಗೆ ಪರಿಚಯಿಸಿದ ಕೀರ್ತಿ ಭಾರತಕ್ಕೆ ಸಲ್ಲುತ್ತದೆ. ಯೋಗದ ಮೂಲಕ ಆರೋಗ್ಯಕರ ಜೀವನಶೈಲಿಯನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಕರೆ ನೀಡಿದರು.

ಡಾ. ಅಶೋಕ ಮತ್ತಿಕಟ್ಟಿ ಯೋಗ ಪ್ರಾರ್ಥನೆ ಪ್ರಸ್ತುತಪಡಿಸಿದರು. ಕಾರ್ಯಕ್ರಮದಲ್ಲಿ ಡಾ. ಸತೀಶ ಹೊಂಬಾಳಿ ಯೋಗಾಸನ ಮತ್ತು ಪ್ರಾಣಾಯಾಮ ನಡೆಸಿಕೊಟ್ಟರು. ಬ್ರಹ್ಮಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ಜಯಂತಿ ಅಕ್ಕನವರು ಧ್ಯಾನ, ಸಂಕಲ್ಪ ಮತ್ತು ಶಾಂತಿಮಂತ್ರವನ್ನು ನಡೆಸಿಕೊಟ್ಟರು.

ಇದೇ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ತ ಶಾಲಾ ಮಟ್ಟದಲ್ಲಿ ಏರ್ಪಡಿಸಲಾಗಿದ್ದ ರಸಪ್ರಶ್ನೆ ಹಾಗೂ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಡಿವೈಎಸ್‌ಪಿ ಮುರ್ತುಜಾ ಖಾದ್ರಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರುಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್.ಎಸ್. ನೀಲಗುಂದ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ತಾಲೂಕು ಗ್ಯಾರಂಟಿ ಯೋಜನಾ ಸಮಿತಿಯ ಸದಸ್ಯರಾದ ಕೃಷ್ಣಗೌಡ ಎಚ್.ಪಾಟೀಲ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ್ವರ ವಿಭೂತಿ, ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಯೋಗಾಸಕ್ತರು, ಶಾಲಾ ವಿದ್ಯಾರ್ಥಿಗಳು, ಸಂಘ-ಸಂಸ್ಥೆಯವರು ಹಾಜರಿದ್ದರು.

ಶಾಲಾ ವಿದ್ಯಾರ್ಥಿಗಳು, ಯೋಗಾಸಕ್ತರು, ವಿವಿಧ ಇಲಾಖೆ ಅಧಿಕಾರಿಗಳು ಯೋಗ ಶಿಕ್ಷಕರ ಮಾರ್ಗದರ್ಶನದಲ್ಲಿ ಸೂರ್ಯನಮಸ್ಕಾರ, ಪ್ರಾಣಾಯಾಮ ಮತ್ತು ವಿವಿಧ ಯೋಗಾಸನಗಳನ್ನು ಪ್ರದರ್ಶಿಸಿದರು. ವಿದ್ಯಾರ್ಥಿಗಳ ಉತ್ಸಾಹಭರಿತ ಭಾಗವಹಿಸುವಿಕೆ ಕಾರ್ಯಕ್ರಮಕ್ಕೆ ವಿಶೇಷ ಮೆರುಗು ನೀಡಿತು.

ಯೋಗವು ಕೇವಲ ದೈಹಿಕ ವ್ಯಾಯಾಮವಲ್ಲ, ಮನಸ್ಸು, ಮತ್ತು ದೇಹದ ಸಾಮರಸ್ಯವನ್ನು ಸಾಧಿಸುವ ಒಂದು ಜೀವನ ಕಲೆ. ಇದು ವಿದ್ಯಾರ್ಥಿಗಳಲ್ಲಿ ಏಕಾಗ್ರತೆ, ಆತ್ಮವಿಶ್ವಾಸ ಮತ್ತು ಆರೋಗ್ಯಕರ ಜೀವನಶೈಲಿಯನ್ನು ಬೆಳೆಸುತ್ತದೆ. ಯೋಗವು ಒತ್ತಡವನ್ನು ಕಡಿಮೆ ಮಾಡುವುದರ ಜೊತೆಗೆ, ಜೀವನದಲ್ಲಿ ಶಿಸ್ತು ಮತ್ತು ಸಂಯಮವನ್ನು ತರುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!