ಬೆಂಗಳೂರು:- ನಗರದ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಯುವಕನ ಮೇಲೆ ದುಷ್ಕರ್ಮಿಗಳು ಆ್ಯಸಿಡ್ ಎರಚಿರುವ ಘಟನೆ ಜರುಗಿದೆ.
ಸೆ.21ರಂದು ನಡೆದಿರುವ ಘಟನೆ ತಡವಾಗಿ ಬೆಳೆಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಗಾಯಾಳು ಯುವಕನಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಗಾಯಾಳು ಹೇಳಿಕೆ ದಾಖಲಿಸಿ ದೂರು ಪಡೆದಿರುವ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಆ್ಯಸಿಡ್ ದಾಳಿಯಲ್ಲಿ ಇದು 2 ದಾಳಿಯಾಗಿದೆ.
ಇನ್ನೂ ಈ ಹಿಂದೆ ನಡೆದಿದ್ದ ಆ್ಯಸಿಡ್ ದಾಳಿ ಇಡೀ ಬೆಂಗಳೂರನ್ನು ಬೆಚ್ಚಿಬೀಳಿಸಿತ್ತು. 2022ರಲ್ಲಿ ಹಾಡಹಗಲೇ ಯುವತಿ ಮೇಲೆ ಆ್ಯಸಿಡ್ ದಾಳಿ ನಡೆದಿತ್ತು. ಆರೋಪಿ ನಾಗ ಯುವತಿ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿದ್ದ. ಯುವತಿ ಮೇಲಿನ ಆ್ಯಸಿಡ್ ದಾಳಿ ಪ್ರಕರಣ ರಾಜ್ಯಾದ್ಯಂತ ಭಾರಿ ಚರ್ಚೆ ಆಗಿತ್ತು ಎನ್ನಲಾಗಿದೆ.