ಮತ್ತಷ್ಟು ಬಸ್‌ಗಳ ಖರೀದಿಗೆ ಕ್ರಮ: ಸಚಿವ ಸಂತೋಷ್ ಲಾಡ್

0
Spread the love

ವಿಜಯಸಾಕ್ಷಿ ಸುದ್ದಿ, ಬೆಳಗಾವಿ-ಸುವರ್ಣಸೌಧ: ರಾಜ್ಯ ಸರ್ಕಾರದ ಶಕ್ತಿ ಯೋಜನೆಯ ಸಮರ್ಪಕ ಅನುಷ್ಠಾನದ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಈ ಹಿಂದೆ 16 ತಿಂಗಳಲ್ಲಿ ಅಂದಾಜು 4294 ಬಸ್‌ಗಳನ್ನು ಖರೀದಿಸಿದ್ದು, ಬರುವ ಮಾರ್ಚ್ ಅಂತ್ಯದೊಳಗೆ ಮತ್ತಷ್ಟು ಬಸ್‌ಗಳನ್ನು ಖರೀದಿಸಲಾಗುವುದು ಎಂದು ಸಚಿವ ಸಂತೋಷ್ ಲಾಡ್ ಹೇಳಿದರು.

Advertisement

ಈಗಾಗಲೇ ನಾಲ್ಕೂ ಸಾರಿಗೆ ನಿಗಮಗಳಲ್ಲಿ 9000 ಚಾಲನಾ ಸಿಬ್ಬಂದಿಗಳ ನೇಮಕಾತಿಗೆ ಸರ್ಕಾರ ಅನುಮತಿ ನೀಡಿದೆ. ಈ ಪೈಕಿ ಈಗಾಗಲೇ ಅಂದಾಜು 4000 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. ಬಾಕಿ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು ಎಂದು ಸಚಿವರು ವಿಧಾನ ಪರಿಷತ್ತನಲ್ಲಿ ಸದಸ್ಯರಾದ ಎಸ್.ವಿ. ಸಂಕನೂರ ಅವರು ಕೇಳಿದ ಪ್ರಶ್ನೆಗೆ ಸಾರಿಗೆ ಮತ್ತು ಮುಜರಾಯಿ ಸಚಿವರ ಪರವಾಗಿ ಉತ್ತರಿಸಿದರು.

ಶಕ್ತಿ ಯೋಜನೆಯು ಜಾರಿಯಾದ ಬಳಿಕ ವಿಶೇಷವಾಗಿ ಮಹಿಳೆಯರಿಗೆ ಸಾಕಷ್ಟು ಅನುಕೂಲವಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಉದ್ಯೋಗದಲ್ಲಿ ತೊಡಗಿಕೊಂಡು ಆರ್ಥಿಕ ಅಭಿವೃದ್ಧಿ ಸಾಧಿಸಲು ಸಾಧ್ಯವಾಗಿದೆ ಎಂದು ಸಚಿವರು ಪ್ರತಿಕ್ರಿಯಿಸಿದರು.


Spread the love

LEAVE A REPLY

Please enter your comment!
Please enter your name here