HomeBelgaumರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ತಡೆಗೆ ಕ್ರಮ: ಗೃಹಸಚಿವ ಪರಮೇಶ್ವರ್

ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ತಡೆಗೆ ಕ್ರಮ: ಗೃಹಸಚಿವ ಪರಮೇಶ್ವರ್

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಬೆಳಗಾವಿ-ಸುವರ್ಣಸೌಧ: ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ಬಗ್ಗೆ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ವಾಟ್ಸಾಪ್ ಹಾಗೂ ಸೈಬರ್ ಜಾಗೃತಿಯ ಸಂದೇಶಗಳ ಮೂಲಕ ಸಾರ್ವಜನಿಕರಲ್ಲಿ ಮೂಡಿಸಲಾಗುತ್ತಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದರು.

ಅವರು ಗುರುವಾರ ವಿಧಾನ ಪರಿಷತ್ತಿನಲ್ಲಿ ಸದಸ್ಯ ಕೆ.ಪ್ರತಾಪ್ ಸಿಂಹ ನಾಯಕ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು.

ರಾಜ್ಯದಲ್ಲಿ ಪ್ರಸ್ತುತ ವರ್ಷದಲ್ಲಿ ಡಿಜಿಟಲ್ ಅರೆಸ್ಟ್ ಸಂಬಂಧಿತ ಒಟ್ಟು 641 ಪ್ರಕರಣಗಳಲ್ಲಿ 109 ಕೋಟಿ ರೂ.ಗೂ ಹೆಚ್ಚು ಮೊತ್ತದ ವಂಚನೆ ಆಗಿದ್ದು, ಅದರಲ್ಲಿ 9.45 ಕೋಟಿ ರೂಗಳನ್ನು ವಶಪಡಿಸಿಕೊಂಡು, 27  ಜನರನ್ನು ಬಂಧಿಸಲಾಗಿದೆ ಎಂದರು.

ಸಾರ್ವಜನಿಕರನ್ನು ಇಂತಹ ಅಪರಾಧಿಕ ಕೃತ್ಯಗಳ ಮೂಲಕ ವಂಚಿಸಲು ನಕಲಿ ಸಿಮ್ ಕಾರ್ಡ್ ಹಾಗೂ ನಕಲಿ ಬ್ಯಾಂಕ್ ಖಾತೆಗಳನ್ನು ಮಾರಾಟಕ್ಕೆ ಬಳಸುವ ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಸಕ್ರಿಯವಾಗಿರುವ ಖಾತೆಗಳು ಹಾಗೂ ಗುಂಪುಗಳನ್ನು ಪತ್ತೆ ಹಚ್ಚಿ, 268 ಫೇಸ್‌ಬುಕ್ ಗುಂಪುಗಳು, 465 ಟೆಲಿಗ್ರಾಂ ಗುಂಪುಗಳು, 15 ಇನ್‌ಸ್ಟಾಗ್ರಾಂ ಖಾತೆಗಳು ಹಾಗೂ 61 ವಾಟ್ಸ್ಆಪ್ ಗುಂಪುಗಳನ್ನು ನಿಷ್ಕ್ರಿಯಗೊಳಿಸಲಾಗಿದೆ ಎಂದರು.

ದೇಶದಾದ್ಯಂತ ಡಿಜಿಟಲ್ ಅರೆಸ್ಟ್ ಪ್ರಕರಣಗಳು ದಿನೇ ದಿನೇ ಅಧಿಕವಾಗುತ್ತಿದ್ದು, ಇದುವರೆಗೆ ಇಡೀ ದೇಶದಲ್ಲಿ 42000 ಪ್ರಕರಣ ದಾಖಲಾಗಿದ್ದು, ರಾಜ್ಯದಲ್ಲಿ 11 ಸಾವಿರ ಪ್ರಕರಣ ದಾಖಲಾಗಿದೆ. ಸಾರ್ವಜನಿಕರು ಸೈಬರ್ ವಂಚನೆ ಆದ ಕೂಡಲೇ ಉಚಿತ ಸಹಾಯವಾಣಿ ಸಂಖ್ಯೆ-1930 ಗೆ ಮಾಹಿತಿ ನೀಡುವಂತೆ ತಿಳಿಸಿದರು.

ಶಾಲಾ-ಕಾಲೇಜುಗಳಿಗೆ, ಇತರೆ ಸಂಸ್ಥೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳು ಹಾಗೂ  ಸಾರ್ವಜನಿಕರಿಗೆ ಡಿಜಿಟಲ್ ಅರೆಸ್ಟ್ ವಂಚನೆಯ ಬಗ್ಗೆ ಜಾಗೃತಿ ಮೂಡಿಸಲು ಜಾಥಾ ಕೈಗೊಳ್ಳಲಾಗುತ್ತಿದೆ. ಡಿಜಿಟಲ್ ಅರೆಸ್ಟ್ ಮೂಲಕ ಸಾರ್ವಜನಿಕರನ್ನು ವಂಚಿಸುತ್ತಿರುವ ಸೈಬರ್ ವಂಚಕರ ವಿರುದ್ಧ ಪ್ರಕರಣಗಳನ್ನು ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!