ಮಿಲನಾ ನಾಗರಾಜ್ ಅವರು ತಾಯಿ ಆಗಿದ್ದಾರೆ. ಈ ಖುಷಿ ಸುದ್ದಿಯನ್ನು ಡಾರ್ಲಿಂಗ್ ಕೃಷ್ಣ ಅವರು ಸೋಶಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದಾರೆ. ಈ ದಂಪತಿಗೆ ಫ್ಯಾನ್ಸ್ ಶುಭಾಶಯ ಕೋರುತ್ತಿದ್ದಾರೆ. ಮಿಲನಾ ನಾಗರಾಜ್ ಅವರಿಗೆ ಜನಿಸಿದ್ದು ಹೆಣ್ಣು ಮಗು. ಈ ವಿಚಾರವನ್ನು ದಂಪತಿ ರಿವೀಲ್ ಮಾಡಿದ್ದಾರೆ. ಮಗು ಹಾಗೂ ತಾಯಿ ಆರೋಗ್ಯವಾಗಿದ್ದಾರೆ ಎಂದು ಡಾರ್ಲಿಂಗ್ ಕೃಷ್ಣ ಅವರು ಮಾಹಿತಿ ಹಂಚಿಕೊಂಡಿದ್ದಾರೆ.
ಮಗಳು ಹುಟ್ಟಿದ್ದಾಳೆ. ತಾಯಿ, ಮಗು ಆರೋಗ್ಯವಾಗಿದ್ದಾರೆ. ಈ ಜರ್ನಿಯಲ್ಲಿ ಮಿಲನಾ ನಾಗರಾಜ್ ಅನುಭವಿಸಿದ ನೋವು, ಮಾಡಿದ ತ್ಯಾಗ, ತೋರಿದ ಧೈರ್ಯಕ್ಕೋಸ್ಕರ ನನಗೆ ಬಗ್ಗೆ ಹೆಮ್ಮೆ ಇದೆ. ಈ ಜರ್ನಿಯಲ್ಲಿ ಸಾಗುವ ಎಲ್ಲ ತಾಯಂದರಿಗೆ ನನ್ನ ಸೆಲ್ಯೂಟ್. ಇದನ್ನು ನೋಡಿ ನನಗೆ ಮಹಿಳೆಯರ ಮೇಲೆ ಇದ್ದ ಗೌರವ ಡಬಲ್ ಆಯ್ತು. ನನಗೆ ಮಗಳು ಇರೋದರಿಂದ ನಾನು ಹೆಮ್ಮೆ,
ಅದೃಷ್ಟವಂತ ತಂದೆ” ಎಂದು ಡಾರ್ಲಿಂಗ್ ಕೃಷ್ಣ ಅವರು ವಿಶೇಷ ಪೋಸ್ಟ್ ಹಂಚಿಕೊಂಡಿದ್ದಾರೆ. ಮಿಲನಾ ಅವರ ಕೈಯಲ್ಲಿ ಸದ್ಯ ಯಾವುದೇ ಹೊಸ ಸಿನಿಮಾ ಇಲ್ಲ. ಅವರು ಮಗುವಿನ ಆರೈಕೆಯಲ್ಲಿ ಕೆಲ ವರ್ಷ ಬ್ಯುಸಿ ಆಗಲಿದ್ದಾರೆ. ಆ ಬಳಿಕೆ ಅವರು ನಟನೆಗೆ ಕಂಬ್ಯಾಕ್ ಮಾಡುತ್ತಾರಾ ಎಂಬುದನ್ನು ಕಾದು ನೋಡಬೇಕು.