ಬೆಂಗಳೂರು: ಬೆನ್ನುನೋವಿನಿಂದ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದ ಕೊಲೆ ಆರೋಪಿ ನಟ ದರ್ಶನ್ ಇಂದು ಬಿಜಿಎಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಬೆನ್ನುನೋವಿಗೆ ಶಸ್ತ್ರಚಿಕಿತ್ಸೆ ಪಡೆಯದೇ 49 ದಿನಗಳ ನಂತರ ದರ್ಶನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ದರ್ಶನ್ ಕುಟುಂಬ ಫಿಸಿಯೋಥೆರಪಿ ಮೂಲಕವೇ ಬೆನ್ನುನೋವು ಗುಣಪಡಿಸಿಕೊಳ್ಳುವ ಪ್ಲ್ಯಾನ್ ಮಾಡಿದೆ, ಹೀಗಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಸಿದ್ದಾರೆ. ಆಸ್ಪತ್ರೆಯ ಬಿಲ್ ಸೇರಿದಂತೆ, ಎಲ್ಲಾ ಪ್ರಕ್ರಿಯೆಗಳು ಮುಗಿಯುತ್ತಿದ್ದಂತೆ ದರ್ಶನ್ ತಮ್ಮ ಕಾರಿನಲ್ಲಿ ತೆರಳಿದ್ದಾರೆ.
ಬಳ್ಳಾರಿ ಜೈಲಿನಲ್ಲಿದ್ದ ನಟ ದರ್ಶನ್‌ಗೆ ಕಳೆದ ಅಕ್ಟೋಬರ್ 31ರಂದು ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಪಡೆದ 2-3 ದಿನಗಳ ಬಳಿಕ ದರ್ಶನ್ ಆಸ್ಪತ್ರೆಗೆ ದಾಖಲಾದರೂ ಫಿಸಿಯೋಥೆರಪಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಫೋಟೋ ಸಹ ವೈರಲ್ ಆಗಿತ್ತು. ಇದೀಗ ಚಿಕಿತ್ಸೆ ಪಡೆಯದೇ ದರ್ಶನ್ ಡಿಸ್ಚಾರ್ಜ್ ಆಗಿದ್ದಾರೆ.



