ನಟಿ ರಮ್ಯಾ ಮತ್ತು ದರ್ಶನ್ ಅಭಿಮಾನಿಗಳ ನಡುವೆ ಸೋಷಿಯಲ್ ಮೀಡಿಯಾ ವಾರ್ ಜೋರಾಗಿದೆ. ಹೌದು ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ರೇಣುಕಾಸ್ವಾಮಿ ಕುಟುಂಬದ ಪರವಾಗಿ ನಿಂತ ಕಾರಣಕ್ಕೆ ಪದೇ ಪದೇ ದರ್ಶನ್ ಫ್ಯಾನ್ಸ್ ಆಕ್ರೋಶಕ್ಕೆ ಕಾರಣವಾಗುತ್ತಿದ್ದಾರೆ ನಟಿ ರಮ್ಯಾ.
ಈ ಆಕ್ರೋಶ ಅತಿರೇಕಕ್ಕೆ ಹೋದ ಕಾರಣದಿಂದಾಗಿ ನಟಿ ರಮ್ಯಾ ಕೂಡ ದರ್ಶನ್ ಫ್ಯಾನ್ಸ್ನ ಮುಖವಾಡ ಕಳಚುತ್ತಿದ್ದಾರೆ. ತಮಗೆ ಅಶ್ಲೀಲ ಮೆಸೇಜ್ ಕಳುಹಿಸುತ್ತಿರುವ ದರ್ಶನ್ ಫ್ಯಾನ್ಸ್ ಹೆಸರಿನ ಸೋಷಿಯಲ್ ಮೀಡಿಯಾ ಅಕೌಂಟ್ಗಳ ಸ್ಕ್ರೀನ್ಶಾಟ್ ತೆಗೆದು, ಅಪ್ಲೋಡ್ ಮಾಡುತ್ತಿದ್ದಾರೆ.
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ದರ್ಶನ್ ಹೆಸರು ಕೇಳಿ ಬಂದಾಗ, ಅವತ್ತು ಕೂಡ ರಮ್ಯಾ ಮಾತಾಡಿದ್ದರು. ದರ್ಶನ್ರಿಂದ ತಪ್ಪಾಗಿದ್ದರೆ ಕಠಿಣ ಶಿಕ್ಷೆಯೇ ಆಗಬೇಕು ಅಂತ ಪ್ರತಿಕ್ರಿಯೆ ನೀಡಿದ್ದರು. ಜಾಮೀನು ವಿಚಾರದಲ್ಲಿ ಸುಪ್ರೀಂ ಕೋರ್ಟ್ ತೀರ್ಪನ್ನು ಕಾಯ್ದಿರಿಸಿದಾಗಲೂ ದರ್ಶನ್ ವಿರುದ್ಧವೇ ಪೋಸ್ಟ್ ಮಾಡಿದ್ದರು.
ಹಾಗಾಗಿ ದರ್ಶನ್ ಫ್ಯಾನ್ಸ್ ರಮ್ಯಾ ವಿರುದ್ಧ ತಿರುಗಿ ಬಿದ್ದಿದ್ದರು. ಈಗೀಗ ತೀರಾ ವೈಯಕ್ತಿಕವಾಗಿ ರಮ್ಯಾಗೆ ಟೀಕೆ ಮಾಡುತ್ತಿದ್ದಾರೆ. ಅಶ್ಲೀಲ ಪದಗಳಿಂದ ನಿಂದಿಸುತ್ತಿದ್ದಾರೆ. ಆ ಎಲ್ಲಾ ಸ್ಕ್ರೀನ್ಶಾಟ್ ಅನ್ನು ರಮ್ಯಾ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ದರ್ಶನ್ ಅಭಿಮಾನಿಗಳ ವಿರುದ್ಧ ನಟಿ ರಮ್ಯಾ ಕೆಂಡಾಮಂಡಲರಾಗಿದ್ದಾರೆ. ಅಶ್ಲೀಲ ಕಮೆಂಟ್ ಅಕೌಂಟ್ಗಳನ್ನು ಬಹಿರಂಗ ಪಡಿಸಿದ ರಮ್ಯಾ, ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ. `ರೇಣುಕಾಸ್ವಾಮಿ ಹಾಗೂ ಡಿಬಾಸ್ ಫ್ಯಾನ್ಸ್ ಸಂದೇಶಕ್ಕೂ ಯಾವುದೇ ವ್ಯತ್ಯಾಸವಿಲ್ಲ. ಇವರೆಲ್ಲಾ ಸ್ತ್ರೀದ್ವೇಷ ಮನೋಭಾವದವರು. ಇಂಥವರಿಂದಲೇ ಹೆಣ್ಣು ಮಕ್ಕಳು ದೌರ್ಜನ್ಯ, ಅತ್ಯಾಚಾರಕ್ಕೆ ಒಳಗಾಗುತ್ತಿದ್ದಾರೆ’ ಅಂತ ಡಿ ಬಾಸ್ ಫ್ಯಾನ್ಸ್ ವಿರುದ್ಧ ಮತ್ತೆ ಕಿಡಿಕಾರಿದ್ದಾರೆ