ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ದರ್ಶನ್ ಹಾಗೂ ಏಳು ಜನರಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿದೆ. ಪ್ರಕರಣದ ಎಲ್ಲಾ ಆರೋಪಿಗಳು ಸದ್ಯ ಜಾಮೀನಿನ ಮೇಲೆ ಆಚೆ ಇದ್ದಾರೆ. ಈಗ ಬೆಂಗಳೂರಿನ ಸಿಸಿಎಚ್ 57ರ ಕೋರ್ಟ್‌ಗೆ ಎಲ್ಲಾ ಆರೋಪಿಗಳು ಹಾಜರಾಗಿದ್ದಾರೆ.
ಪವಿತ್ರಾ ಗೌಡ, ಪ್ರದೋಶ್ ಸೇರಿದಂತೆ ಹಲವು ಆರೋಪಿಗಳು ನ್ಯಾಯಾಲಯಕ್ಕೆ ಮೊದಲೇ ಹಾಜರಾಗಿದ್ದರು. ನಟ ದರ್ಶನ್ ಮಾತ್ರ ತುಸು ತಡವಾಗಿ ನ್ಯಾಯಾಲಯದ ಬಳಿ ಬಂದರು. ಜಾಮೀನು ದೊರೆತ ಬಳಿಕ ಇದೇ ಮೊದಲ ಬಾರಿಗೆ ರೇಣುಕಾ ಸ್ವಾಮಿ ಕೊಲೆ ಆರೋಪಿಗಳೆಲ್ಲ ಒಟ್ಟಿಗೆ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.
ಜಾಮೀನು ನೀಡುವ ಸಮಯದಲ್ಲಿ ಪ್ರತಿ ತಿಂಗಳು ಆರೋಪಿಗಳು ಕೋರ್ಟ್‌ಗೆ ಹಾಜರಾಗಬೇಕು ಎಂದು ಷರತ್ತು ವಿಧಿಸಲಾಗಿತ್ತು. ಅದರಂತೆ ಶುಕ್ರವಾರ ಎಲ್ಲಾ ಆರೋಪಿಗಳು ನ್ಯಾಯಾಲಯಕ್ಕೆ ಹಾಜರು ಆಗಲು ದಿನಾಂಕ ನಿಗಧಿ ಮಾಡಲಾಗಿತ್ತು. ಹಾಗಾಗಿ ಇಂದು ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎಲ್ಲ ಆರೋಪಿಗಳು ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ.