ನಟ ದರ್ಶನ್ʼಗೆ ಮಧ್ಯಂತರ ಜಾಮೀನು ಮಂಜೂರು: DCM ಡಿಕೆ ಶಿವಕುಮಾರ್ ಹೇಳಿದ್ದೇನು.?

0
Spread the love

ಬೆಂಗಳೂರು: ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ ಅವರಿಗೆ ಕರ್ನಾಟಕ ಹೈಕೋರ್ಟ್​ ಜಾಮೀನು ಮಂಜೂರು ಮಾಡಿದೆ. ಸದ್ಯ ಈ ಸಂಬಂಧ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕ್ರಿಯೇ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಾಲಯದ ತೀರ್ಪನ್ನು ತಾನು ಪ್ರಶ್ನಿಸುವ ಕೆಲಸ ತಾನು ಮಾಡಲ್ಲ, ನ್ಯಾಯಾಲಯದ ತೀರ್ಪನ್ನು ತಮ್ಮ ಸರ್ಕಾರ ಸ್ವಾಗತಿಸುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

Advertisement

ಇನ್ನೂ ವಕ್ಫ್ ಬೋರ್ಡ್ ಜಮೀನು ಮತ್ತು ರೈತರಿಗೆ ನೀಡಿದ ನೋಟೀಸ್​ಗಳಿಗೆ ಸಂಬಂಧಿಸಿದಂತೆ ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗಲೂ ರೈತರಿಗೆ ನೋಟೀಸ್​ಗಳನ್ನು ನೀಡಲಾಗಿತ್ತು, ಈಗ ತಮ್ಮ ಸರ್ಕಾರ ನೀಡಿರುವ ನೋಟೀಸ್​ಗಳನ್ನು ವಾಪಸ್ಸು ಪಡೆಯಲಾಗುವುದು, ರೈತರ ಜಮೀನುಗಳಿಗೆ ಯಾವುದೇ ರೀತಿಯ ಸಮಸ್ಯೆ ಇಲ್ಲ ಎಂದು ಹೇಳಿದರು.

 


Spread the love

LEAVE A REPLY

Please enter your comment!
Please enter your name here