ರೇಣುಕಾಸ್ವಾಮಿ ಕೊಲೆ ಪ್ರಕರಣದ ಏಳು ಆರೋಪಿಗಳಿಗೆ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಕ್ಯಾನ್ಸಲ್ ಮಾಡಿದೆ. ನ್ಯಾಯಾಲಯದ ಆದೇಶದಂತೆ ಆರೋಪಿಗಳನ್ನು ಕೂಡಲೇ ಬಂಧಿಸಲಾಗುತ್ತದೆ. ಇಂದು ಮಧ್ಯಾಹ್ನ ಮೂರು ಗಂಟೆಯ ವೇಳೆಗೆ ಪವಿತ್ರಾ ಗೌಡ ಅವರನ್ನು ಬಂಧಿಸುವ ಸಾಧ್ಯತೆ ಇದೆ. ಆದರೆ ದರ್ಶನ್ ಅವರು ಮನೆಯಲ್ಲಿ ಇಲ್ಲ ಎನ್ನಲಾಗಿದ್ದು ನಿನ್ನೆ ರಾತ್ರಿಯೇ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗುತ್ತಿದೆ.
ಇಂದು ಸುಪ್ರೀಂ ಕೋರ್ಟ್ ತೀರ್ಪು ಬರುವ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿಯೇ ದರ್ಶನ್ ಬೆಂಗಳೂರಿನ ಮನೆಯಿಂದ ಹೊರಟ್ಟಿದ್ದು ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ ಎನ್ನಲಾಗುತ್ತಿದೆ. ನಿನ್ನೆ ರಾತ್ರಿಯವರೆಗೂ ಪತ್ನಿ ವಿಜಯಲಕ್ಷ್ಮಿ ಅವರ ಜೊತೆ ಬೆಂಗಳೂರಿನ ಮನೆಯಲ್ಲೇ ಇದ್ದ ದರ್ಶನ್ ರಾತ್ರಿ ಬಳಿಕ ಅಜ್ಞಾತ ಸ್ಥಳಕ್ಕೆ ಹೋಗಿದ್ದಾರೆ ಎನ್ನುವ ಮಾಹಿತಿ ದರ್ಶನ್ ಆಪ್ತ ಬಳಗದವರು ತಿಳಿಸಿದ್ದಾರೆ.
ಇನ್ನೂ ದರ್ಶನ್ ಪತ್ನಿ ಮತ್ತಷ್ಟು ಟೆನ್ಷನ್ ನಲ್ಲಿದ್ದಾರೆ. ಹೇಗಾದರು ಮಾಡಿ ಈ ಕೇಸ್ ನಿಂದ ದರ್ಶನ್ ಅವರನ್ನು ಹೊರ ತರಬೇಕು ಎಂದು ಮಾಡಿದ ಪ್ರಯತ್ನವೆಲ್ಲವು ವಿಫಲವಾಗಿದೆ. ಸುಪ್ರೀಂ ಕೋರ್ಟ್ ತೀರ್ಪು ಹಿನ್ನೆಲೆಯಲ್ಲಿ ವಿಜಯಲಕ್ಷ್ಮಿ ಅವರು ಹೊಸಕೆರೆಹಳ್ಳಿಯಲ್ಲಿ ಇರುವ ಪ್ರೆಸ್ಟೀಜ್ ಸೌತ್ ರಿಡ್ಜ್ ಅಪಾರ್ಟ್ಮೆಂಟ್ನಲ್ಲಿಯೇ ಇದ್ದಾರೆ. ಸುಪ್ರಿಂ ಕೋರ್ಟ್ ತೀರ್ಪು ಬಂದಿರುವುದರಿಂದ ಬೆಳಗ್ಗೆಯಿಂದಲೂ ಮನೆಯಿಂದ ಹೊರಬಂದಿಲ್ಲ. ಒಟ್ನಲ್ಲಿ ಆದಷ್ಟು ಬೇಗನೇ ದರ್ಶನ್ ಅವರನ್ನು ಪೊಲೀಸರು ಬಂಧಿಸಲಿದ್ದಾರೆ.