ತೀವ್ರ ಬೆನ್ನು ನೋವಿನಿಂದ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ದರ್ಶನ್ ಇಂದು 10 ಗಂಟೆ ಬಳಿಕ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ರೇಣುಕಾಸ್ವಾಮಿ ಕೊಲೆ ಆರೋಪ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿದ್ದ ನಟ ದರ್ಶನ್ ಅವರು ತೀವ್ರ ಬೆನ್ನು ನೋವಿನ ಕಾರಣದಿಂದ ಮೆಡಿಕಲ್ ಗ್ರೌಂಡ್ಸ್ ಮೇಲೆ ಜಾಮೀನು ಪಡೆದುಕೊಂಡು ಹೊರಗೆ ಬಂದಿದ್ದರು. ನಂತರ ನಟ ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಒಂದೂವರೆ ತಿಂಗಳಿನಿಂದ ಬಿಜಿಎಸ್ ಆಸ್ಪತ್ರೆಯಿಂದ ಚಿಕಿತ್ಸೆ ಪಡೆಯುತ್ತಿದ್ದ ದರ್ಶನ್ ಇಂದು ಆಸ್ಪತ್ರೆಯಿಂದ ಡಿಸ್ಜಾರ್ಜ್ ಆಗಲಿದ್ದಾರೆ.
ನಟನಿಗೆ ಸರ್ಜರಿ ಮಾಡುವುದೋ ಅಥವಾ ಫಿಸಿಯೋ ಥೆರಪಿ ಮಾಡುವುದೋ ಎನ್ನುವ ಬಗ್ಗೆ ಸಾಕಷ್ಟು ಗೊಂದಲವಿತ್ತು. ಆದರೆ ಈಗ ಹೈಕೋರ್ಟ್ ಜಾಮೀನು ಮಂಜೂರು ಮಾಡುತ್ತಿದ್ದಂತೆ ನಟ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ಅಲ್ಲದೆ ಮನೆಯಲ್ಲೇ ಫಿಸಿಯೋ ಥೆರಪಿ ಚಿಕಿತ್ಸೆ ಮುಂದುವರೆಸಲಿದ್ದಾರೆ.
ಬೇಲ್ ಪ್ರಕ್ರಿಯೆ ಮುಗಿಸಲು ನಟ ದರ್ಶನ್ ಡಿ.16ರಂದು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ಗೆ ತರಳಿದ್ದರು. ಕೋರ್ಟ್ನಲ್ಲೂ ನಿಲ್ಲೋಕೂ ನಡೆದಾಡೋಕು ಆಗದೆ ಪರದಾಡ್ತಿದ್ರು. ಆ ಬಳಿಕ ಬೇಲ್ ಪ್ರಕ್ರಿಯೆ ಮುಗಿಸಿ ವಾಪಸ್ ಆಸ್ಪತ್ರೆಗೆ ದರ್ಶನ್ ತೆರಳಿದ್ದ ದರ್ಶನ್ ಇಂದು ಡಿಸ್ಚಾರ್ಜ್ ಆಗಲಿದ್ದಾರೆ.



