ಬೆಂಗಳೂರು: ರೇಣುಕಾಸ್ವಾಮಿ ಪ್ರಕರಣದಲ್ಲಿ ಆರೋಪಿಗಳಾದ ನಟ ದರ್ಶನ್, ಪವಿತ್ರಾ ಗೌಡ ಸೇರಿ ಇತರೆ 7 ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿತ್ತು. ಸದ್ಯ ಇದನ್ನು ಪ್ರಶ್ನಿಸಿ ಸರ್ಕಾರ, ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಕೆ ಮಾಡಿತ್ತು. ಸದ್ಯ ಇದೀಗ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು ನಟ ದರ್ಶನ್, ಪವಿತ್ರಾ ಗೌಡ ಹಾಗೂ 7 ಆರೋಪಿಗಳ ಜಾಮೀನು ಅನ್ನು ರದ್ದು ಮಾಡಿದೆ.
ಇನ್ನೂ ಈ ವಿಚಾರವಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಪ್ರತಿಕ್ರಿಯಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಾನೂನು ಎಲ್ಲರಿಗೂ ಒಂದೇ. ದೇಶದಲ್ಲಿ ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ. ನೆಲದ ಕಾನೂನನ್ನು ಎಲ್ಲರೂ ಗೌರವಿಸಬೇಕು. ಮುಂದಿನ ನ್ಯಾಯ ಹೋರಾಟ ಮಾಡಲು ಆರೋಪಿಗಳಿಗೆ ಅವಕಾಶ ಇದೆ, ಅದಕ್ಕೂ ದೇಶದ ಕಾನೂನಿನಲ್ಲಿ ಅವಕಾಶವಿದೆ. ನಾವು ಕಾನೂನನ್ನೇ ಪಾಲಿಸಬೇಕು” ಎಂದು ಅವರು ಹೇಳಿದ್ದಾರೆ.
ಇವತ್ತು ಸುಪ್ರೀಂ ಕೋರ್ಟ್ನಲ್ಲಿ ರೇಣುಕಾಸ್ವಾಮಿ ಪ್ರಕರಣದ ಆರೋಪಿ ದರ್ಶನ್, ಪವಿತ್ರಾಗೌಡ ಹಾಗೂ 7 ಆರೋಪಿಗಳ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರದ ಅರ್ಜಿಯ ಆದೇಶ ಹೊರ ಬಿದ್ದಿದೆ. ಹೈಕೋರ್ಟ್ ತೀರ್ಪಿನಲ್ಲಿ ದೋಷವಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ಈ ಪ್ರಕರಣವನ್ನು ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಜೆ.ಬಿ ಪರ್ದಿವಾಲಾ ಹಾಗೂ ನ್ಯಾಯಾಮೂರ್ತಿ ಮಹಾದೇವನ್ ಪೀಠ ತೀರ್ಪು ನೀಡಿದೆ.