ಬಳ್ಳಾರಿ: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯದಲ್ಲಿ ನಡೆದಿದ್ದು, ದರ್ಶನ್ ತೂಗುದೀಪ ಜಾಮೀನು ಅರ್ಜಿ ವಿಚಾರಣೆಯಲ್ಲಿ ವಕೀಲರ ವಾದ ಅಂತ್ಯವಾಗಿದ್ದು, ಜಾಮೀನು ಅರ್ಜಿ ಕುರಿತ ಆದೇಶವನ್ನು ಅಕ್ಟೋಬರ್ 14 ರಂದು ನ್ಯಾಯಾಧೀಶರು ಹೊರಡಿಸಲಿದ್ದಾರೆ.
ಇಬ್ಬರೂ ವಕೀಲರು ತಮ್ಮ ವಾದಗಳನ್ನು ಅಂತ್ಯಗೊಳಿಸಿದ್ದು, ನ್ಯಾಯಾಧೀಶರು ಆದೇಶವನ್ನು ಅಕ್ಟೋಬರ್ 14ಕ್ಕೆ ಕಾಯ್ದಿರಿಸಿದ್ದಾರೆ. ಇಂದು ದರ್ಶನ್ ಪರ ಹಿರಿಯ ಕ್ರಿಮಿನಲ್ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದರೆ ಪೊಲೀಸರ ಪರವಾಗಿ ಎಸ್‌ಪಿಪಿ ಪ್ರಸನ್ನ ಕುಮಾರ್ ವಾದಿಸಿದರು.
ಬುಧವಾರ ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆಯನ್ನು ಪೂರ್ಣಗೊಳಿಸಿದ್ದ ಕೋರ್ಟ್ ಅ.14 ರಂದು ಆದೇಶ ಪ್ರಕಟಿಸುವುದಾಗಿ ಹೇಳಿತ್ತು. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ದರ್ಶನ್ ಅವರು ಬಳ್ಳಾರಿ ಜೈಲಿನಲ್ಲಿದ್ದರೆ ಪವಿತ್ರಾ ಗೌಡ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿದ್ದಾರೆ.



