ನಟ ದರ್ಶನ್ ಜಾಮೀನು ಭವಿಷ್ಯ ಇಂದು ನಿರ್ಧಾರ: ದಾಸನಿಗೆ ಸಿಗುತ್ತಾ ಜೈಲಿನಿಂದ ಮುಕ್ತಿ!

0
Spread the love

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಆರೋಪಿ ನಟ ದರ್ಶನ್, ಪವಿತ್ರಾ ಹಾಗೂ ಇತರೆ ಕೆಲವರ ಜಾಮೀನು ಅರ್ಜಿ ವಿಚಾರಣೆಯನ್ನು ನ್ಯಾಯಾಲಯ ಮತ್ತೊಮ್ಮೆ ಮುಂದೂಡಿದ್ದು, ಇಂದು ಮಧ್ಯಾಹ್ನ 12.30ಕ್ಕೆ ದರ್ಶನ್​ ಬೇಲ್​ ಅರ್ಜಿ ವಿಚಾರಣೆಗೆ ಬರಲಿದೆ. ಪ್ರಕರಣದ ಕೆಲ ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಮೊದಲಿಗೆ ನಡೆದು ವಕೀಲರು ವಾದಿಸಿದರು. ಬಳಿಕ ಪ್ರಕರಣದ ಎಸ್​ಪಿಪಿ ಪ್ರಸನ್ನ ಕುಮಾರ್ ಅವರು ವಾದ ಸರಣಿ ಆರಂಭಿಸಿ,

Advertisement

ದರ್ಶನ್ ಹಾಗೂ ಪವಿತ್ರಾ ಪರ ವಕೀಲರು ಪ್ರಕರಣದ ತನಿಖೆ ಬಗ್ಗೆ ಎತ್ತಿದ್ದ ಪ್ರಶ್ನೆಗಳಿಗೆ ಉತ್ತರಗಳನ್ನು ನೀಡಲು ಪ್ರಾರಂಭಿಸಿದರು. ಎಸ್​ಪಿಪಿ ಅವರ ವಾದ ಸರಣಿ ಸುದೀರ್ಘವಾಗಿ ನಡೆದಿದ್ದು, ಅಂತಿಮವಾಗಿ ನ್ಯಾಯಾಲಯದ ಸಮಯ ಮೀರಿದ ಕಾರಣ ಪ್ರಕರಣದ ವಿಚಾರಣೆಯನ್ನು ಇಂದು ಮಧ್ಯಾಹ್ನ 12:30ಕ್ಕೆ ಮುಂದೂಡಲಾಯ್ತು.

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸಂಕಷ್ಟ ಮುಗಿಯುವಂತೆ ಕಾಣುತ್ತಿಲ್ಲ. ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರೂ, ವಿಚಾರಣೆಯನ್ನು ಮುಂದೂಡಿಕೊಂಡೇ ಬರಲಾಗಿದೆ. ಇನ್ನು ದರ್ಶನ್‌ ಅವರು ಜಾಮೀನು ಸಿಗಬಹುದು ಎನ್ನುವ ಭರವಸೆಯಲ್ಲಿದ್ದಾರೆ ಎನ್ನಲಾಗಿದೆ.        ಈ ಬಾರಿಯಾದರೂ ದಾಸನಿಗೆ ಬೇಲ್ ಸಿಗುತ್ತಾ ಎಂದು ಅಭಿಮಾನಿಗಳು ಕಾತುರದಿಂದ ಕಾಯ್ತಿದ್ದು, ದರ್ಶನ್‌ ಜಾಮೀನು ಭವಿಷ್ಯ ಏನಾಗಲಿದೆ ಎಂದು ಕಾದುನೋಡಬೇಕಿದೆ.


Spread the love

LEAVE A REPLY

Please enter your comment!
Please enter your name here