ಮೂತ್ರಪಿಂಡ ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ತೆಲುಗಿನ ಖ್ಯಾತ ಖಳ ನಟ 54 ವರ್ಷದ ಫಿಶ್ ವೆಂಕಟ್ ನಿಧನ ಹೊಂದಿದ್ದಾರೆ.
Advertisement
ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಕೆಲವು ದಿನಗಳಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದುರಾದೃಷ್ಟವಶಾತ್ ಇದೀಗ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಅವರ ಎರಡೂ ಮೂತ್ರಪಿಂಡಗಳು ಹಾನಿಗೊಳಗಾಗಿದ್ದರಿಂದ, ಅವರ ಕುಟುಂಬ ಸದಸ್ಯರು ಕೆಲವು ದಿನಗಳ ಹಿಂದೆ ಡಯಾಲಿಸಿಸ್‌ಗಾಗಿ ಬೋಡುಪ್ಪಲ್‌ನ ಆಸ್ಪತ್ರೆಗೆ ದಾಖಲಿಸಿದರು.
ವೈದ್ಯರು ಎರಡೂ ಮೂತ್ರಪಿಂಡಗಳನ್ನು ಕಸಿ ಮಾಡಲು ಹೇಳಿದ್ದರು. ಅವರ ಆರ್ಥಿಕವಾಗಿ ಸಬಲರಾಗಿಲ್ಲ. ಹೀಗಾಗಿ, ವೈದ್ಯಕೀಯ ಸೇವೆಗಳನ್ನು ಪಡೆಯಲು ಸಾಧ್ಯವಾಗಿಲ್ಲ. ದಾನಿಗಳಿಂದ ಸಹಾಯಕ್ಕಾಗಿ ಮನವಿ ಮಾಡಿದ ಕೆಲವೇ ದಿನಗಳಲ್ಲಿ ಫಿಶ್ ವೆಂಕಟ್ ಸಾವನ್ನಪ್ಪಿದ್ದರಿಂದ ಕುಟುಂಬ ಸದಸ್ಯರು ಕಣ್ಣೀರು ಹಾಕುತ್ತಿದ್ದಾರೆ.