ಬೆಂಗಳೂರು ಗ್ರಾಮಾಂತರ:- ನಟ ಹಾಗೂ ನಿರ್ದೇಶಕ ಪ್ರಥಮ್ ಮೇಲೆ ಹಲ್ಲೆ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಮೇಲೆ ವಿವಿಧ ಸೆಕ್ಷನ್ ಗಳ ಅಡಿ ಕೇಸ್ ದಾಖಲಾಗಿದೆ.
ತಮ್ಮ ಮೇಲೆ ಹಲ್ಲೆ ಮಾಡಿರುವುದಾಗಿ ಪ್ರಥಮ್ ದೂರು ಕೊಟ್ಟ ಬೆನ್ನಲ್ಲೇ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ BNS u/s 351(2)(3), 352,126(2) r/w 3(5) ಅಡಿಯಲ್ಲಿ ಪ್ರಕರಣ ದಾಖಲಾಗಿದೆ. A1 ಬೇಕರಿ ರಘು, A2 ಯಶಸ್ವಿನಿ ಮತ್ತು ಇತರರು ಎಂದು ಪ್ರಕರಣ ದಾಖಲು ಮಾಡಲಾಗಿದೆ.
ಆಗಿದ್ದೇನು?
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರಾಮಯ್ಯನಪಾಳ್ಯ ಬಳಿ ಸಿನಿಮಾ ಪ್ರಮೋಟರ್ ಮಹೇಶ್ ಎಂಬುವವರ ದೇವಸ್ಥಾನದ ಪೂಜೆಗೆ ಹೋಗಿದ್ದಾಗ ಪ್ರಥಮ್ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.
ನನ್ನ ಬಾಸ್ ದರ್ಶನ್ ಬಗ್ಗೆ ಮಾತನಾಡ್ತಿಯಾ ಅಂತ ಡ್ರಾಗರ್ ಮತ್ತು ಚಾಕು ತೋರಿಸಿ ಬೆದರಿಕೆ ಹಾಕಿರುವುದಾಗಿ ಪ್ರಥಮ್ ದೂರು ನೀಡಿದ್ದರು. ಪ್ರಥಮ್ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಂದಿನಿಂದ ತನಿಖೆ ಕೈಗೊಂಡಿದ್ದಾರೆ.