ದೊಡ್ಡಬಳ್ಳಾಪುರ:- ನಟ ಪ್ರಥಮ್‌ಗೆ ಜೀವ ಬೆದರಿಕೆ ಕೇಸ್ ಗೆ ಸಂಬಧಪಟ್ಟಂತೆ ಆರೋಪಿಗಳಾದ ಬೇಕರಿ ರಘು, ಯಶಸ್ವಿನಿಗೆ ಜಾಮೀನು ಮಂಜೂರು ಮಾಡಿ ದೊಡ್ಡಬಳ್ಳಾಪುರದ ಸೆಷನ್ಸ್ ಕೋರ್ಟ್ ಆದೇಶ ಹೊರಡಿಸಿದೆ.
ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ರೌಡಿಶೀಟರ್ ಬೇಕರಿ ರಘು ಹಾಗೂ ಎ2 ಆರೋಪಿ ಯಶಸ್ವಿನಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಗೆ ವಿಚಾರಣೆಗಾಗಿ ಹಾಜರಾಗಿದ್ದರು. ಬಳಿಕ ದೊಡ್ಡಬಳ್ಳಾಪುರದ ಸೆಷನ್ಸ್ ಕೋರ್ಟ್ನಲ್ಲಿ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದರು. ಅರ್ಜಿ ಸ್ವೀಕರಿಸಿದ್ದ ನ್ಯಾಯಾಲಯ 3 ಗಂಟೆಗೆ ತೀರ್ಪು ಕಾಯ್ದಿರಿಸಿತ್ತು. ಆನಂತರ ಜಾಮೀನು ಮಂಜೂರು ಮಾಡಿದೆ.
ಇನ್ನೂ ಈ ಪ್ರಕರಣದ ಬಗ್ಗೆ ಪೊಲೀಸರು ಗಮನ ವಹಿಸಿಕೊಂಡಿದ್ದು, ಎಲ್ಲಾ ದೃಶ್ಯಾವಳಿಗಳು, ಸಿಸಿಟಿವಿ ಫೂಟೇಜ್, ಕಾರ್ಯಕ್ರಮದ ಸಾಕ್ಷ್ಯಾಧಾರಗಳ ಪರಿಶೀಲನೆ ನಡೆಯುತ್ತಿದೆ. ಸಂಬಂಧಿತ ವ್ಯಕ್ತಿಗಳ ಹೇಳಿಕೆಗಳು ಮತ್ತು ಘಟನೆಯ ಬಗ್ಗೆ ತನಿಖೆ ಮುಂದುವರಿಯಲಿದೆ. ಈ ವಿವಾದದಲ್ಲಿ ರೌಡಿಶೀಟರ್ ಹೆಸರುಗಳು, ಜಾಮೀನು ವಿಚಾರ ಹಾಗೂ ನಟ-ನಟಿಯರ ನಡುವಿನ ಮಾತುಕತೆ ಕುರಿತು ಮಾಧ್ಯಮಗಳಲ್ಲಿ ಭಾರೀ ಚರ್ಚೆ ಆಗುತ್ತಿದೆ. ಇದೀಗ ನ್ಯಾಯಾಲಯದಿಂದ ಷರತ್ತುಬದ್ಧ ಜಾಮೀನು ನೀಡಿದ ಬಳಿಕ, ಪ್ರಕರಣ ಮತ್ತಷ್ಟು ಹೊಸ ತಿರುವು ಪಡೆದುಕೊಂಡಿದೆ.