ಕಾಂತಾರ ಸಿನಿಮಾದ ಮೂಲಕ ಫ್ಯಾನ್ ಇಂಡಿಯಾ ನಟನಾಗಿ ಗುರುತಿಸಿಕೊಂಡಿರುವ ನಟ ರಿಷಬ್ ಶೆಟ್ಟಿ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಕಾಂತಾರ ಸಿನಿಮಾದ ಶೂಟಿಂಗ್ ಹಿನ್ನೆಲೆಯಲ್ಲಿ ಊರಿನಲ್ಲೇ ಇರುವ ರಿಷಬ್ ಶೆಟ್ಟಿ, ಕಳೆದ ದಿನ ರಾತ್ರಿಯೇ ಕಾಂತಾರ ಸಿನಿಮಾ ತಂಡದ ಜೊತೆ ಸಿಂಪಲ್ ಆಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಸಿನಿಮಾ ಸೆಟ್‌ನಲ್ಲೇ ಕೇಕ್ ಕತ್ತರಿಸಿ ತಂಡದ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದು ಈ ವೇಳೆ ಪತ್ನಿ ಪ್ರಗತಿ ಶೆಟ್ಟಿ ಕೂಡ ಸಾಥ್ ನೀಡಿದ್ದಾರೆ.
ಕಾಂತಾರ ಸಿನಿಮಾದ ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿದೆ. ಹೀಗಾಗಿ ಊರಿನಲ್ಲಿಯೇ ರಿಷಬ್ ಶೆಟ್ಟಿ ಬರ್ತಡೇ ಆಚರಿಸಿಕೊಂಡಿದ್ದಾರೆ. ಇನ್ನೂ ರಿಷಬ್ ಶೆಟ್ಟಿ ಹುಟ್ಟುಹಬ್ಬಕ್ಕೆ ಕಾಂತಾರ ಚಾಪ್ಟರ್ ೧ ಕಡೆಯಿಂದ ಬಿಗ್ ಅಪ್ಡೇಟ್ ಸಿಕ್ಕಿದೆ. ಸದ್ಯ ಸಿನಿಮಾದ ಹೊಸ ಪೋಸ್ಟರ್ ರಿಲೀಸ್ ಮಾಡಿರೋ ತಂಡ ವಿಶೇಷ ಮಾಹಿತಿ ಒಂದನ್ನು ಹಂಚಿಕೊಂಡಿದೆ.
‘ಕಾಂತಾರ: ಚಾಪ್ಟರ್ 1’ ಚಿತ್ರದ ಸೆಟ್ನಲ್ಲಿ ಸಾಕಷ್ಟ ಅವಘಡಗಳು ಸಂಭವಿಸಿದವು. ಹೀಗಾಗಿ ಸಿನಿಮಾದ ರಿಲೀಸ್ ಡೇಟ್ ಸದ್ಯಕ್ಕಿಲ್ಲ ಎಂದು ಹೇಳಲಾಗುತ್ತಿತ್ತು. ಆದರೆ ಚಿತ್ರತಂಡ ಅಂದುಕೊಂಡ ದಿನದಂದೆ ಸಿನಿಮಾ ರಿಲೀಸ್ ಮಾಡಲು ಮುಂದಾಗಿದೆ. ಈ ಮೂಲಕ ಅಭಿಮಾನಿಗಳಿಗೆ ಅಂದುಕೊಂಡ ದಿನದಂದೆ ನಿಮ್ಮ ಮುಂದೆ ಬರಲಿದ್ದೇವೆ ಎಂದು ಚಿತ್ರತಂಡ ತಿಳಿಸಿದೆ. ಅಂದ ಹಾಗೆ ಅಕ್ಟೋಬರ್ 2 ಗಾಂಧೀ ಜಯಂತಿಯಂದು ಸಿನಿಮಾ ರಿಲೀಸ್ ಆಗಲಿದೆ.
ಕಾಂತಾರ ಕೊನೆಯ ಘಟ್ಟ ತಲುಪಿದ್ದು ಕುಂದಾಪುರದ ಕೆರಾಡಿ ಸುತ್ತಮುತ್ತ ಚಿತ್ರೀಕರಣ ನಡೆಯುತ್ತಿದೆ. ಹೀಗಾಗಿ ಬ್ಯುಸಿ ಇರುವ ರಿಷಭ್ ಹುಟುಹಬ್ಬ ಆಚರಣೆಗೆ ಈ ಬಾರಿ ಹೆಚ್ಚಿನ ಆದ್ಯತೆ ನೀಡಿಲ್ಲ. ರಿಷಬ್ ಶೆಟ್ಟಿ ದತ್ತು ಪಡೆದಿರುವ ಕೆರಾಡಿ ಸರ್ಕಾರಿ ಶಾಲೆಯ ಮಕ್ಕಳು ರಿಷಭ್ ಶೆಟ್ಟಿಗೆ ಶುಭಾಶಯ ತಿಳಿಸಿದ್ದಾರೆ.