ನಟ ಸುದೀಪ್ ತಾಯಿ ಸರೋಜಾ ನಿಧನ!

0
Spread the love

ಸ್ಯಾಂಡಲ್‌ ವುಡ್‌ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರು ಇಂದು ಬೆಳಗ್ಗೆ ನಿಧನ ಹೊಂದಿದ್ದಾರೆ. ಅವರು ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಸುದೀಪ್ ಅವರ ತಾಯಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಅವರು ನಿಧನರಾಗಿದ್ದಾರೆ.

Advertisement

ತಾಯಿಯ ಮೃತದೇಹವನ್ನು ಮಧ್ಯಾಹ್ನ 12 ಗಂಟೆಗೆ ಸುದೀಪ್​ರ ಜೆಪಿ ನಗರ ನಿವಾಸಕ್ಕೆ ತರಲಾಗುವುದು, ಮಧ್ಯಾಹ್ನ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸುದೀಪ್ ಅವರ ತಾಯಿ ಸರೋಜಾ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಚಿತ್ರರಂಗದ ಗಣ್ಯರು, ಅಭಿಮಾನಿಗಳು ಸೇರಿದಂತೆ ಜೆಪಿ ನಗರದ ನಿವಾಸದತ್ತ ಆಗಮಿಸುತ್ತಿದ್ದಾರೆ.

 


Spread the love

LEAVE A REPLY

Please enter your comment!
Please enter your name here